ಬಾಲಕನನ್ನು 26 ಬಾರಿ ಇರಿದು ಕೊಂದ ಅಮೆರಿಕದ ವ್ಯಕ್ತಿ

Palestinian American Boy 6 Stabbed 26 Times By US Man In Hate Crime
Published on

ನವದೆಹಲಿ:  ಅಮೆರಿಕದ ವ್ಯಕ್ತಿಯೊಬ್ಬರು ಇಸ್ರೇಲ್, ಹಮಾಸ್ ನಡುವಿನ ಸಂಘರ್ಷವನ್ನು ಗಂಭೀರವಾಗಿ ತೆಗೆದುಕೊಂಡು ಮುಸ್ಲಿಂ ಬಾಲಕನನ್ನು 26 ಬಾರಿ ತಿವಿದು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

ಇಸ್ರೇಲ್, ಹಮಾಸ್ ನಡುವಿನ ಸಂಘರ್ಷವನ್ನು ಗಂಭೀರವಾಗಿ ತೆಗೆದುಕೊಂಡ ಅಮೆರಿಕದ ವ್ಯಕ್ತಿಯೊಬ್ಬ ಮುಸ್ಲಿಂ ಕುಟುಂಬವೊಂದರ ಮನೆಯ ಮೇಲೆ ದಾಳಿ ನಡೆಸಿದ್ದಾಬೆ. ಬಾಲಕನ ಎದೆ, ತಲೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿದಿದ್ದಾನೆ. ಪೊಲೀಸರು ಆಗಮಿಸಿದಾಗ ಮಹಿಳೆ ಹಾಗೂ ಬಾಲಕನಿಗೆ ಗಂಭೀರವಾಗಿ ಗಾಯವಾಗಿತ್ತು, ಪ್ರಕರಣ ದಾಖಲಿಸುವ ಮೊದಲು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.  26 ಬಾರಿ ಇರಿತಕ್ಕೊಳಗಾದ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ, ಆತನ ತಾಯಿ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ, ಚಿಕಿತ್ಸೆ ನೀಡಲಾಗುತ್ತಿದೆ.  ಶವ ಪರೀಕ್ಷೆಯ ಸಮಯದಲ್ಲಿ ಬಾಲಕನ ಹೊಟ್ಟೆಯಿಂದ 7 ಇಂಚಿನ ಬ್ಲೇಡ್ ಮಾದರಿಯ ಚಾಕುವನ್ನು ಹೊರ ತೆಗೆಯಲಾಗಿದೆ.

ಇಸ್ರೇಲ್​ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕೂಡ ಬೆಂಬಲ ಸೂಚಿಸಿದ್ದಾರೆ. ಗಾಜಾದ ಪರಿಸ್ಥಿತಿ ತೀರಾ ಹದಗೆಟ್ಟಿದೆ, ಹಮಾಸ್​ನ ಇಸ್ರೇಲ್​ ಮೇಲಿನ ದಾಳಿಯ ಪ್ರತಿಯಾಗಿ ಇಸ್ರೇಲ್(Israel)ಗಾಜಾ ಮೇಲೆ ದಾಳಿ ನಡೆಸುತ್ತಿದೆ. ಗಾಜಾದಲ್ಲಿರುವ ಜನರಿಗೆ ದಕ್ಷಿಣ ಭಾಗಕ್ಕೆ ತೆರಳುವಂತೆ 3 ಗಂಟೆಗಳ ಗಡುವು ನೀಡಿತ್ತು. ಗಡುವು ಮುಕ್ತಾಯವಾಗುತ್ತಿದ್ದಂತೆ 1 ಮಿಲಿಯನ್ ಮಂದಿ ಗಾಜಾದಿಂದ ಪಲಾಯನ ಮಾಡಿದ್ದಾರೆ.

ತಾವು ವಾಯು, ಸಮುದ್ರ, ಭೂಮಿ ಮೂಲಕ ದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಕೆಯನ್ನು ನೀಡಿತ್ತು. ಈ ಕಾರಿಡಾರ್​ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಾವುದೇ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net