ಜೂ.3ಕ್ಕೆ ಪಂಚಾಚಾರ್ಯ ಯುಗಮಾನೋತ್ಸವ

iti college
Published on

ಶಿವಮೊಗ್ಗ: ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಎಸ್‌ಜೆಪಿ ಐಟಿಐ ಕಾಲೇಜಿನ 31ನೇ ವರ್ಷದ ವಾರ್ಷಿಕೋತ್ಸವ ಹಾಗೂ ವೀರಶೈವ ಲಿಂಗಾಯತ ವಧು - ವರರ ಸಮಾವೇಶವನ್ನು ಜೂ.3ರಂದು ಎಂಆರ್‌ಎಸ್ ವೃತ್ತದ ಬಳಿಯಿರುವ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಸಂಸ್ಥಾಪಕ ವಿಘ್ನೇಶ್ವರಯ್ಯ ನೀ.ಸೋಲಾಪುರ ತಿಳಿಸಿದ್ದಾರೆ.

ಅಂದು ಬೆಳಗ್ಗೆ 10ಕ್ಕೆ ಎಂಆರ್‌ಎಸ್ ವೃತ್ತದಿಂದ ಕಾಲೇಜಿನವರೆಗೆ ಡಾ. ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳನ್ನು ಪೂರ್ಣಕುಂಭ ಮೆರವಣಿಗೆ ಮೂಲಕ ಕರೆತರಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಂದು ಬೆಳಗ್ಗೆ 8 ರಿಂದ 10.30ರವರೆಗೆ ಹಾಗೂ ಮಧ್ಯಾಹ್ನ 1.30 ರಿಂದ ಸಂಜೆ 5ರವರೆಗೆ ಟಿಎಂಎಇಎಸ್ ಆಯುರ್ವೇದ ಮಹಾವಿದ್ಯಾಲಯದಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಔಷಧ ವಿತರಣೆ ಇರುತ್ತದೆ. ಮಧುಮೇಹ, ಗ್ಯಾಸ್ಟ್ರಿಕ್, ಮೂಳೆ ಸಂಬಂಧಿತ ಮುಂತಾದ ಕಾಯಿಲೆಗಳಿದ್ದವರು ತಪಾಸಣೆಗೆ ಆಗಮಿಸಬಹುದು ಎಂದರು.

ಇದೇ ಸಂದರ್ಭದಲ್ಲಿ ವೀರಶೈವ ವಧು - ವರರ ಸಮಾವೇಶ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಐಟಿಐ ಕಾಲೇಜಿನ 31ನೇ ವರ್ಷದ ವಾರ್ಷಿಕೋತ್ಸವದ ಸಾನ್ನಿಧ್ಯವನ್ನು ಶ್ರೀ ರಂಭಾಪುರಿ ಜಗದ್ಗುರುಗಳು ವಹಿಸಲಿದ್ದಾರೆ. ಮಳಲಿ ಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಕಡೇನಂದಿಹಳ್ಳಿಯ ಶ್ರೀ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರುತ್ತಾರೆ. ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಶಾಸಕ ಎಸ್.ಎನ್.ಚನ್ನಬಸಪ್ಪ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಮುಖರಾದ ಪರಮೇಶ್ವರ್, ಮಲ್ಲಿಕಾರ್ಜುನ ಸ್ವಾಮಿ, ವೀರಸಂಗಯ್ಯ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net