2ಎ ಮೀಸಲಾತಿಗಾಗಿ ಪಂಚಮಸಾಲಿ ಪ್ರತಿಭಟನಾಕಾರರಿಂದ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ

panchamasali protest
Published on

ಬೆಂಗಳೂರು: ಮೀಸಲಾತಿಗಾಗಿ ಆಗ್ರಹಿಸಿ ಸತ್ಯಾಗ್ರಹ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳನ್ನು ಬಂದ್​ ಮಾಡಿ ರಸ್ತೆ ತಡೆ ಮಾಡಲಿದ್ದಾರೆ.

ಅನೇಕ ದಿನಗಳಿಂದ ಪಂಚಮಸಾಲಿ ಸಮುದಾಯ ಪ್ರವರ್ಗ 2ಎ ಮೀಸಲಾತಿಗಾಗಿ ಸರ್ಕಾರವನ್ನು ಕೇಳುತ್ತಲೇ ಬಂದಿತ್ತು. ಇದೀಗ ಅದು ಹೋರಾಟದ ಹಾದಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಮಾ.4ರಂದು ಶನಿವಾರ ಬೆಳಿಗ್ಗೆ 11ಕ್ಕೆ ರಾಜ್ಯಾದ್ಯಂತ ಏಕಕಾಲದಲ್ಲಿ ಪಂಚಮಸಾಲಿಗಳ ಸತ್ಯಾಗ್ರಹ 50ನೇ ದಿನ ತಲುಪಲಿದ್ದು ಅದರ ಅಂಗವಾಗಿ ರಾಷ್ಟ್ರೀಯ, ರಾಜ್ಯ ಹೆದ್ದಾರಿ, ಬಂದ್‌ ಮಾಡಲಿದ್ದಾರೆ.

ಶೀಘ್ರವೇ ಮೀಸಲಾತಿಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿರುವ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಜನವರಿ 14ರ ಸಂಕ್ರಾಂತಿಯಂದು ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net