ಶಿಗ್ಗಾಂವಿಯಲ್ಲಿರುವ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ ಪಂಚಮಸಾಲಿ ಸಮಾಜ

ಜಯ-ಮೃತ್ಯುಂಜಯ-ಸ್ವಾಮೀಜಿ
Published on

ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ 2A ಬದಲಾಗಿ 2D ಮಿಸಲಾತಿ ನೀಡಿರುವ ಹಿನ್ನಲೆ ನಾಳೆ(ಜ.13) ಶಿಗ್ಗಾಂವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ಪಂಚಮಸಾಲಿ ಸಮಾಜ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಶಿಗ್ಗಾಂವಿಯ ರಾಣಿ ಚೆನ್ನಮ್ಮ ಸರ್ಕಲ್​ನಿಂದ ಬೆಳಗ್ಗೆ 10 ಗಂಟೆಗೆ ಸಿಎಂ ನಿವಾಸದವರೆಗೂ ಬೃಹತ್ ಪಾದಯಾತ್ರೆ ನಡೆಯಲಿದೆ.

ಪಂಚಮಸಾಲಿ ಸಮಾಜದ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ವಿಜಯಾನಂದ ಕಾಶಪ್ಪನವರ, ಅರವಿಂದ ಬೆಲ್ಲದ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಎಬಿ ಪಾಟೀಲ್, ವಿನಯ್ ಕುಲಕರ್ಣಿ, ವಿಜಯ್ ಕುಲಕರ್ಣಿ, ಸೇರಿದಂತೆ ಸಮಾಜದ ಮುಖಂಡರು ಸೇರಿದಂತೆ ಸಾವಿರಾರು ಜನ ಸೇರುವ ನೀರಿಕ್ಷೆ ಇದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net