ಮಕ್ಕಳಲ್ಲಿ ಪಾಲಕರು ಕ್ರೀಡಾಸಕ್ತಿ ಬೆಳೆಸಲಿ

shuttle
ಸಾಗರದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಆಟಗಾರ್ತಿ ವಿಭಾ ಹೆಗ್ಗೋಡು ಅವರನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಸನ್ಮಾನಿಸಿದರು. ಗಣಪತಿ ಮಂಡಗಳಲೆ, ಎಲ್.ಚಂದ್ರಪ್ಪ, ರವಿಕುಮಾರ್, ಗೌತಮ್, ಕಲಸೆ ಚಂದ್ರಪ್ಪ ಇತರರಿದ್ದರು.
Published on

ಸಾಗರ: ದೈಹಿಕ ಹಾಗೂ ಮಾನಸಿಕ ದೃಢತೆಗೆ ಕ್ರೀಡೆ ಸಹಕಾರಿ. ಮಕ್ಕಳಿಗೆ ಓದಿನ ಜತೆಗೆ ಕ್ರೀಡೆ ಬಗ್ಗೆಯೂ ಆಸಕ್ತಿ ಬೆಳೆಯುವಂತೆ ಮಾಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು

ಸಾಗರದ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಸಾಗರ ಷಟಲ್ ಬ್ಯಾಡ್ಮಿಂಟನ್ ಸಂಸ್ಥೆಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡಾಪಟುಗಳ ಹಿತಾಸಕ್ತಿ ದೃಷ್ಟಿಯಿಂದ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗಿದೆ. ಒಳಾಂಗಣ ಕ್ರೀಡಾಂಗಣಕ್ಕೆ ಕ್ರೀಡಾ ಪರಿಕರ, ವಿದ್ಯುತ್ ಜನರೇಟರ್ ಅಳವಡಿಸಲಾಗಿದೆ. ಸಾಗರದ ಈಜುಕೊಳ ಅಭಿವೃದ್ಧಿಗೆ ಮೊದಲ ಹಂತದಲ್ಲಿ ಎರಡು ಕೋಟಿ ರೂ. ನೀಡಲಾಗಿತ್ತು. ದುರಸ್ತಿ ಕಾರ್ಯಕ್ಕೆ ಸುಮಾರು 20 ಲಕ್ಷ ರೂ. ನೀಡಲಾಗಿದೆ. ಮಕ್ಕಳ ಕ್ರೀಡಾ ಪ್ರತಿಭೆಯನ್ನು ಪ್ರೋತಾಹಿಸಲು ಇಂತಹ ಕ್ರೀಡಾಕೂಟಗಳು ಅವಶ್ಯ. ಸಾಗರದ ಮಕ್ಕಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದರು.

ಷಟಲ್ ಬ್ಯಾಡ್ಮಿಂಟನ್ ಆಟಗಾರ್ತಿ 8ನೇ ತರಗತಿ ವಿದ್ಯಾರ್ಥಿನಿ ವಿಭಾ ಹೆಗ್ಗೋಡು ಅವರನ್ನು ಸನ್ಮಾನಿಸಲಾಯಿತು. ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಎಲ್.ಚಂದ್ರಪ್ಪ, ರವಿಕುಮಾರ್, ಗೌತಮ್, ಕಲಸೆ ಚಂದ್ರಪ್ಪ, ಎಚ್.ಜಿ.ಸುಬ್ರಹ್ಮಣ್ಯ ಭಟ್, ಸತ್ಯನಾರಾಯಣ, ದೀಪಕ್, ಡಾ. ಪ್ರಸನ್ನ ಇತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net