

ಹುಣಸೂರು : ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರನ್ನು ಶಿಕ್ಷಕರು ಬೆಂಬಲಿಸಬೇಕೆಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಮನವಿ ಮಾಡಿದರು.
ಪಕ್ಷದ ಅಭ್ಯರ್ಥಿ ಪರ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚಿಸಿ ಮಾತನಾಡಿದರು. ಮರಿತಿಬ್ಬೇಗೌಡ ಕಳೆದ 20 ವರ್ಷಗಳಿಂದ ವಿಧಾನಪರಿಷತ್ ಸದಸ್ಯರಾಗಿ ಶಿಕ್ಷಕರ ನೋವು ನಲಿವುಗಳಿಗೆ ಸ್ಪಂದಿಸಿದ್ದಾರೆ. ಅವರ ಅಪಾರ ಅನುಭವ ನಮ್ಮ ಪಕ್ಷಕ್ಕೆ ಶ್ರೀರಕ್ಷೆಯಾಗಿದೆ.
ತಾಲೂಕಿನಲ್ಲಿ ಸಾಕಷ್ಟು ಶಿಕ್ಷಕರು ಮರಿತಿಬ್ಬೇಗೌಡರ ಬೆಂಬಲಕ್ಕೆ ನಿಂತಿದ್ದಾರೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಆಡಳಿತ, ಗ್ಯಾರಂಟಿ ಯೋಜನೆಗಳು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರಣವಾಗಿದೆ. ತಾಲೂಕಿನ ಸುಶಿಕ್ಷಿತ ಶಿಕ್ಷಕ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡಬೇಕು ಎಂದು ಕೋರಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣ, ಕಾರ್ಯಾಧ್ಯಕ್ಷ ಪುಟ್ಟರಾಜು, ಮುಖಂಡರಾದ ಬಸವರಾಜು, ರಾಘು, ಚಿಕ್ಕಸ್ವಾಮಿ ಇತರರು ಹಾಜರಿದ್ದರು.