ಉದ್ಯಾನ, ಕೆರೆ, ಸಾರ್ವಜನಿಕ ಶೌಚಗೃಹ ಪರಿಶೀಲನೆಗೆ ಅಧಿಕಾರಿಗಳ ತಂಡ ರಚನೆ

1PGEB_j5_400x400
Published on

ಹಾವೇರಿ: ನಗರವು ಜಿಲ್ಲಾ ಕೇಂದ್ರವಾಗಿದ್ದು, ಸುಮಾರು 91 ಸಾವಿರ ಜನಸಂಖ್ಯೆ ಹೊಂದಿದೆ. ನಗರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ನಗರಸಭೆಯ ವ್ಯಾಪ್ತಿಯ ಉದ್ಯಾನವನಗಳು, ಕೆರೆಗಳು ಹಾಗೂ ಸಾರ್ವಜನಿಕ ಶೌಚಗೃಹ ಸ್ಥಿತಿಗತಿಗಳ ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ತಂಡ ರಚಿಸಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಆದೇಶ ಹೊರಡಿಸಿದ್ದಾರೆ.
ಅಪರ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿದ್ದು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರು ಕಾರ್ಯದರ್ಶಿಗಳಾಗಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ನಗರಸಭೆ ಪೌರಾಯುಕ್ತರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಹಾವೇರಿ ತಹಸೀಲ್ದಾರ, ಸಾಮಾಜಿಕ ಅರಣ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ. ಈ ಅಧಿಕಾರಿಗಳು ಖುದ್ದಾಗಿ ಪರಿಶೀಲನೆ ಮಾಡಿ ಜಂಟಿ ವರದಿಯನ್ನು ಸೆ. 15ರೊಳಗಾಗಿ ಸಲ್ಲಿಸುವಂತೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net