

ನವದೆಹಲಿ: ಸಂಸತ್ನ ಮೇಲ್ಮನೆ ರಾಜ್ಯಸಭೆಯಲ್ಲಿ ಈ ವರ್ಷ 73 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅದರಲ್ಲಿ 51 ಸ್ಥಾನಗಳ ಆಯ್ಕೆ ಏಪ್ರಿಲ್ನಲ್ಲಿ ನಡೆಯಲಿದೆ. ರಾಜ್ಯಸಭೆಯಲ್ಲಿ ಬಹುಮತವಿಲ್ಲದ ಬಿಜೆಪಿಗೆ ಇದು ಮಹತ್ವದ ಚುನಾವಣೆಯಾಗಿದ್ದು, ಕಾಂಗ್ರೆಸ್ ಕೂಡ ಹೆಚ್ಚು ಸೀಟುಗಳನ್ನು ಗೆಲ್ಲುವ ಉತ್ಸಾಹದಲ್ಲಿದೆ. ಅಂದಾಜಿನ ಪ್ರಕಾರ ಎರಡೂ ರಾಷ್ಟ್ರೀಯ ಪಕ್ಷಗಳ ಸ್ಥಾನಗಳಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ತೃಣಮೂಲ ಕಾಂಗ್ರೆಸ್ ಮತ್ತು ವೈಎಸ್ಆರ್ ಕಾಂಗ್ರೆಸ್ ತಮ್ಮ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ನಿರೀಕ್ಷೆ ಇದೆ.
ರಾಜ್ಯಸಭೆ ಚುನಾವಣೆ ನಡೆಯುವ ರಾಜ್ಯಗಳು
ಮಹಾರಾಷ್ಟ್ರ- 7, ತಮಿಳುನಾಡು- 6, ಪಶ್ಚಿಮ ಬಂಗಾಳ ಮತ್ತು ಬಿಹಾರ- ತಲಾ 5, ಆಂಧ್ರಪ್ರದೇಶ, ಗುಜರಾತ್- ತಲಾ 4, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಒಡಿಶಾ - ತಲಾ 3, ಜಾರ್ಖಂಡ್ ಮತ್ತು ಛತ್ತೀಸ್ಗಢ- ತಲಾ 2, ಅಸ್ಸಾಂ, ಮಣಿಪುರ, ಹರಿಯಾಣ ಮತ್ತು ಹಿಮಾಚಲಪ್ರದೇಶದ- ತಲಾ 1 ಸ್ಥಾನಗಳು.