

ಶಿಕಾರಿಪುರ: ವೃತ್ತಿ ಜತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ ಎಂದು ವಕೀಲರ ಸಂಘದ ತಾಲೂಕು ಅಧ್ಯಕ್ಷ ಸಂತೋಷ್ಕುಮಾರ್ ಹೇಳಿದರು.
ಡಿ.3ರಂದು ಹಮ್ಮಿಕೊಂಡಿರುವ ವಕೀಲರ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ವಕೀಲರಿಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮಾತನಾಡಿ, ನ್ಯಾಯಾಲಯದ ಕಲಾಪಗಳಲ್ಲಿ ವರ್ಷಪೂರ್ತಿ ತೊಡಗಿಸಿಕೊಳ್ಳುವ ವಕೀಲರು, ಕ್ರೀಡಾಕೂಟದಲ್ಲಿ ಅತ್ಯಂತ ಉತ್ಸಾಹದಿಂದ ಭಾಗಿಯಾಗಿರುವುದು ಸಂತಸದ ಸಂಗತಿ. ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ತಿಳಿಸಿದರು.
ಎರಡು ದಿನಗಳ ಕಾಲ ವಕೀಲರಿಗೆ ವಿವಿಧ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಪ್ರಧಾನ ಕಾರ್ಯದರ್ಶಿ ಎಚ್.ಪಿ.ಪ್ರಕಾಶ್, ಜಿ.ಎನ್.ಶಿವಪ್ರಕಾಶ್, ಕೆ.ಬಿ.ಶಿವನ ಗೌಡ, ಎಂ.ಪರಮೇಶ್ವರಪ್ಪ, ಜಿ.ಕೋಡೆಪ್ಪ, ಜಿ.ಪಿ.ಶಿವರಾಜ್, ವಕೀಲರ ಸಂಘದ ಪದಾಧಿಕಾರಿಗಳು, ಕ್ರೀಡಾಕೂಟದ ಪದಾಧಿಕಾರಿಗಳು ಹಾಜರಿದ್ದರು.