ಹಾವೇರಿ: ಶಿಗ್ಗಾಂವಿ&ಸವಣೂರ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಆರೋಪದಡಿ ಶ್ರೀಕಾಂತ ದುಂಡಿಗೌಡ್ರ ಹಾಗೂ ಸಂಗಮೇಶ ಕಂಬಾಳಿಮಠ ಅವರನ್ನು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರ ಆದೇಶದ ಮೇರೆಗೆ ಬಿಜೆಪಿ ಪಕ್ಷದಿಂದ 6 ವರ್ಷಗಳ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಕಟಣೆ ತಿಳಿಸಿದೆ.