

ಬೆಂಗಳೂರು: ಬಿಜೆಪಿ ಜತೆಗಿನ ಮೈತ್ರಿ ಬೆನ್ನಲ್ಲೇ ಜೆಡಿಎಸ್ ಜೆಡಿಎಸ್ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ನಡೆಸಲಿದೆ.
ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ರಾಜ್ಯ ಪ್ರವಾಸ ನಡೆಯಲಿದ್ದು, ಸೆ.26 ರಂದು ಕಲಬುರಗಿಯಲ್ಲಿ ಪಕ್ಷ ಸಂಘಟನೆಗೆ ಚಾಲನೆ ನೀಡಲಾಗುತ್ತದೆ. ಸೆ.27 ರಂದು ಕೊಪ್ಪಳ ಜಿಲ್ಲೆಯಲ್ಲಿ ಸಭೆ ನಡೆಯಲಿದೆ. ಕೋರ್ ಕಮಿಟಿಯ ಸದಸ್ಯರು ಪ್ರವಾಸ ಕೈಗೊಂಡು ವಿಭಾಗವಾರು ಸಂಘಟನಾ ಸಭೆ ನಡೆಸಲಿದ್ದಾರೆ. ಈ ಎರಡು ಸಭೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ.
ಆಯಾ ವಿಭಾಗದ ವ್ಯಾಪ್ತಿಯ ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ರ್ಪಧಿಸಿದ್ದ ಅಭ್ಯರ್ಥಿಗಳು, ಜಿಲ್ಲೆ ಹಾಗೂ ತಾಲ್ಲೂಕು ಅಧ್ಯಕ್ಷರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ.