ಗೋವಾ-ದೆಹಲಿ ನಡುವಿನ ಏರ್​ ಇಂಡಿಯಾ ವಿಮಾನ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ

Air India flight
Published on

ನವದೆಹಲಿ: ಪ್ರಯಾಣಿಕ ಓರ್ವ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವ ಘಟನೆ ಗೋವಾ-ದೆಹಲಿ ನಡುವಿನ ಏರ್​ ಇಂಡಿಯಾ ವಿಮಾನದಲ್ಲಿ ನಡೆದಿದೆ.

ಏರ್​ ಇಂಡಿಯಾ ವಿಮಾನ ಸಂಖ್ಯೆ AI882ರಲ್ಲಿ ಘಟನೆ ನಡೆದಿದ್ದು ಪ್ರಕರಣ ಸಂಬಂಧ ಆರೋಪಿಯನ್ನು ದೆಹಲಿಯಲ್ಲಿ ಪೊಲೀಸ್​ ವಶಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ.

ವರ್ತನೆ ಪ್ರಶ್ನಿಸಿದ್ದಕ್ಕೆ ಹಲ್ಲೆ

ಈ ಕುರಿತು ಪ್ರತಿಕ್ರಿಯಿಸಿರುವ ಏರ್​ ಇಂಡಿಯಾ ವಕ್ತಾರರು AI882ನಲ್ಲಿ ಮೇ 29ರಂದು ಪ್ರಯಾಣಿಕನೊಬ್ಬನು ಮೊದಲಿಗೆ ಅನುಚಿತವಾಗಿ ವರ್ತಿಸಲು ಶುರು ಮಾಡಿದ್ದಾನೆ. ಇದನ್ನು ಪ್ರಶ್ನಿಸಿದ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಳಿಕ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.

ದೆಹಲಿಯ್ಲಲಿ ವಿಮಾನ ಲ್ಯಾಂಡ್​ ಆದ ನಂತರವೂ ಪ್ರಯಾಣಿಕ ಅನುಚಿತವಾಗಿ ವರ್ತಿಸುವುದನ್ನು ಮುಂದುವರೆಸಿದ. ಈ ಬಗ್ಗೆ ನಾವು ವಿಮಾನ ನಿಲ್ದಾಣದ ನಿಯಂತ್ರಕರಿಗೆ ದೂರು ನೀಡಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದೇವೆ ಎಂದು ಏರ್​ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net