ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ; ಭಾರತ ಮೂಲದ ವ್ಯಕ್ತಿ ಬಂಧನ

American airlines
Published on

ನವದೆಹಲಿ: ಇತ್ತೀಚಿನ ದಿನಗಳಲ್ಲಿ ನಾವು ವಿಮಾನಗಳಲ್ಲಿ ಸಹ ಪ್ರಯಾಣಿಕರ ಮೇಲೆ ಒಂದಿಲ್ಲೊಂದು ತರಹದ ಕಿರುಕುಳ ಪ್ರಕರಣಗಳನ್ನು ನಾವು ಇತ್ತೀಚಿನ ದಿನಗಳಲ್ಲಿ ನೋಡಿರುತ್ತೇವೆ.

ಇದೀಗ ಇದೇ ರೀತಿಯ ಘಟನೆಯೊಂದು ಅಮೆರಿಕನ್​ ಏರ್​ಲೈನ್ಸ್​ ವಿಮಾನದಲ್ಲಿ ನಡೆದಿದ್ದು ಸಾಕಷ್ಟು ಖಂಡನೆ ವ್ಯಕ್ತವಾಗಿದೆ.

ಮೂತ್ರ ವಿಸರ್ಜನೆ

ನ್ಯೂಯಾರ್ಕ್​ನಿಂದ ದೆಹಲಿ ಕಡೆಗೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಓರ್ವ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು ಸಾಕಷ್ಟು ಖಂಡನೆಗೆ ಗುರಿಯಾಗಿದೆ.

ಅಮೆರಿಕನ್​ ಏರ್​ಲೈನ್ಸ್​ ವಿಮಾನ ಸಂಖ್ಯೆ AA292ನಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ವಶಕ್ಕೆ ಒಪ್ಪಿಸಲಾಗಿದೆ.

ಸೂಕ್ತ ಕ್ರಮ

ವಿಮಾನಯಾನ ಸಂಸ್ಥೆಯಿಂದ ವರದಿ ಪಡೆದ ಬಳಿಕ ಏವಿಯೇಷನ್​ ವಾಚ್​ ಡಾಗ್ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ(DGCA) ಈ ವಿಚಾರವನ್ನು ಆಂತರಿಕ ಕಾರ್ಯವಿಧಾನದ ಮೂಲಕ ತನಿಖೆ ನಡೆಸಲಿದೆ ಎಂದು ವರದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net