

ಬೆಂಗಳೂರು: ಮುಂಬೈನಿಂದ ಬರುವ ಪ್ರಯಾಣಿಕರು ಸಾಂಸ್ಥಿಕ ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಯಲಹಂಕದ ಬಳಿ ರೈಲಿನ ವೇಗ ತಗ್ಗಿದಾಗ ಜಿಗಿದು ತಪ್ಪಿಸಿಕೊಳ್ಳಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಸೋಮವಾರ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಯಲಹಂಕ ಬಳಿ ಬರುವಾಗ ನಾಲ್ವರು ಪ್ರಯಾಣಿಕರು ಜಿಗಿದು ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಎಚ್ಚೆತ್ತ ರೈಲ್ವೆ ಪೊಲೀಸರು ಆ ನಾಲ್ವರನ್ನು ಹಿಡಿದು ವಿಚಾರಣೆ ಮಾಡಿದ್ದಾರೆ. ಕ್ವಾರಂಟೈನ್ ತಪ್ಪಿಸಿಕೊಳ್ಳಲು ರೈಲಿನಿಂದ ಹಾರಿದ್ದಾಗಿ ಅವರು ಹೇಳಿದ್ದಾರೆ. ಬುದ್ಧಿವಾದ ಹೇಳಿದ ಪೊಲೀಸರು ನಾಲ್ವರನ್ನೂ ಸಾಂಸ್ಥಿಕ ಕ್ವಾರಂಟೈನ್‌ಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಹಳ್ಳಿಗಳಿಗೆ ಕಾಲಿಟ್ಟ ಕೊವಿಡ್-19; ಸೋಂಕು ಮಣಿಸಲು ಹಳ್ಳಿಗರು ತೆಗೆದುಕೊಂಡ ನಿರ್ಧಾರ ಅನುಕರಣೀಯ
ಪ್ರಯಾಣಿಕರು ಸಾಂಸ್ಥಿಕ ಕ್ವಾರಂಟೈನ್ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ತಪಾಸಣೆ ಬಿಗಿಗೊಳಿಸಲಾಗಿತ್ತು. ಮುಂಬೈ ಪ್ರಯಾಣಿಕರು ರೈಲು ನಿಲ್ದಾಣದಲ್ಲಿ ನಾವು ಕಲಬುರಗಿ, ರಾಯಚೂರು, ದೊಡ್ಡಬಳ್ಳಾಪುರದಿಂದ ಬಂದಿದ್ದೇವೆ ಎಂದು ಸುಳ್ಳು ಹೇಳುತ್ತಿರುವುದು ಕಂಡು ಬಂದಿತು. ಹೀಗಾಗಿ ಅಧಿಕಾರಿಗಳು ಪ್ರತಿ ಪ್ರಯಾಣಿಕರ ಮುಂಗಡ ಟಿಕೆಟ್ ಮಾಹಿತಿ, ಆಧಾರ್ ಸಂಖ್ಯೆ ಸೇರಿ ಅಗತ್ಯ ವಿವರ ಸಂಗ್ರಹಿಸಿದರು. ಬಳಿಕ ಬಿಎಂಟಿಸಿ ಬಸ್‌ಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್‌ಗೆ ಕರೆದೊಯ್ದರು. ಇದನ್ನೂ ಓದಿ: ರಾಜ್ಯದಲ್ಲಿ 24 ಗಂಟೆಯಲ್ಲಿ 161 ಹೊಸ ಕೊವಿಡ್-19 ಪ್ರಕರಣಗಳು: ಇಂದು ಯಾದಗಿರಿಯಲ್ಲೇ ಜಾಸ್ತಿ
ಮುಂಬೈ-ಬೆಂಗಳೂರು ‘ಉದ್ಯಾನ್ ಎಕ್ಸ್‌ಪ್ರೆಸ್’ ವಿಶೇಷ ರೈಲಿನಲ್ಲಿ ಮಂಗಳವಾರ ರಾಜಧಾನಿಗೆ ಆಗಮಿಸಿದ ಒಟ್ಟು 543 ಪ್ರಯಾಣಿಕರ ಪೈಕಿ 154 ಮಂದಿಯನ್ನು ಸಾಂಸ್ಥಿಕ ಕ್ವಾರಂಟೈನ್ ಹಾಗೂ 114 ಪ್ರಯಾಣಿಕರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.