ಪತಂಜಲಿ ಉತ್ಪನ್ನಕ್ಕೆ ರಾಜ್ಯದಲ್ಲೂ ಪ್ರಹಾರ?

Patanjali
Published on

ಬೆಂಗಳೂರು: ಬಾಬಾ ರಾಮ್‌ದೇವ್ ಅವರ ಪತಂಜಲಿ ಕಂಪನಿಯ 14 ಉತ್ಪನ್ನಗಳ ಲೈಸೆನ್ಸ್ ಅನ್ನು ಉತ್ತರಾಖಂಡ ಸರ್ಕಾರ ರದ್ದುಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಚುರುಕಾಗಿದೆ.

ಈಗಾಗಲೇ, ರಾಜ್ಯದಲ್ಲಿ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದರು. ಇದೀಗ ಅವರ ಆಶಯ ಹಾಗೂ ಪ್ರಯತ್ನಕ್ಕೆ ಆನೆಬಲ ಬಂದಂತಾಗಿದೆ.

ಉತ್ತರ ಖಂಡ ಸರ್ಕಾರ ತೀರ್ಮಾನದ ಮಾಹಿತಿ ಬರುತ್ತಿದ್ದಂತೆ ಸಚಿವ ದಿನೇಶ್ ಗುಂಡೂರಾವ್, ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ವಿರುದ್ಧ ಹರಿಹಾಯ್ದಿದ್ದಾರೆ.

ಉತ್ತರಕಾಂಡದ ಬಿಜೆಪಿ ಸರ್ಕಾರ ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ನಾನು ಆದೇಶಿಸಿದ್ದೆ. ಆಗ ತನ್ನ ಮನೆಗೇ ಬೆಂಕಿ ಬಿದ್ದಂತೆ ಚಡಪಡಿಸಿದ್ದ ವಿಪಕ್ಷ ನಾಯಕ ಆರ್.ಅಶೋಕ ಪತಂಜಲಿ ಸಂಸ್ಥೆ ಮೇಲೆ ದ್ವೇಷ ಯಾಕೆ ಎಂದು ನನ್ನನ್ನು ಪ್ರಶ್ನಿಸಿದ್ದರು. ಈಗ ಅವರದ್ದೇ ಪಕ್ಷ ಅಧಿಕಾರದಲ್ಲಿರುವ ಉತ್ತರಕಾಂಡ ಸರ್ಕಾರ ಪತಂಜಲಿಯ 14 ಉತ್ಪನ್ನಗಳ ಪರವಾನಿಗೆಯನ್ನೇ ರದ್ದು ಮಾಡಿದೆ. ಈಗ ಅಶೋಕ್‌ರವರು ನನಗೆ ಕೇಳಿದ್ದ ಪ್ರಶ್ನೆಯನ್ನು ಉತ್ತರಕಾಂಡ ಸರ್ಕಾರಕ್ಕೂ ಕೇಳುತ್ತಾರಾ? ಎಂದು ಕುಟುಕಿದ್ದರೆ.

ಸುಳ್ಳು ಜಾಹೀರಾತು ನೀಡಿ ಜನರಿಗೆ ವಂಚಿಸಿದ್ದ ಬಾಬಾ ರಾಮದೇವ್ ಹಾಗೂ ಆಚಾರ್ಯ ಬಾಲಕೃಷ್ಣ ಒಡೆತನದ ಪತಂಜಲಿ ಸಂಸ್ಥೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಸರ್ವೋಚ್ಚ ನ್ಯಾಯಾಲಯವೇ ಪತಂಜಲಿ ಸಂಸ್ಥೆಯ ವಿಶ್ವಾಸರ್ಹತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾಗ ವಿಪಕ್ಷ ನಾಯಕ ಆರ್.ಅಶೋಕ್ ಪತಂಜಲಿ ಜನ ಮೆಚ್ಚಿದ ಬ್ರ್ಯಾಂಡ್ ಎಂದು ಸರ್ಟಿಫಿಕೇಟ್ ಕೊಟ್ಟಿದ್ದರು.

ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸುವುದೇ ಅಪರಾಧವೆಂಬಂತೆ ವರ್ತಿಸಿದ್ದರು. ಆದರೆ ಅವರ ಪಕ್ಷದ ನೇತೃತ್ವದ ಉತ್ತರಕಾಂಡ ಸರ್ಕಾರ ಪತಂಜಲಿಯ ಲೈಸನ್ಸ್ ರದ್ದು ಮಾಡಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net