ಏಮ್ಸ್​ನಲ್ಲಿ ಮುಂದುವರಿದ ಆತ್ಮಹತ್ಯೆ ಸರಣಿ; ಇಂದು ಮತ್ತೋರ್ವ ರೋಗಿ ಸೂಸೈಡ್​

Sucide
Published on

ನವದೆಹಲಿ: ಏಮ್ಸ್​ ಆಸ್ಪತ್ರೆಯಲ್ಲಿ ಇತ್ತೀಚೆಗೆ ಪದೇಪದೆ ಆತ್ಮಹತ್ಯೆಗಳು ನಡೆಯುತ್ತಿವೆ. ಸ್ವಲ್ಪ ದಿನಗಳ ಹಿಂದೆ ಪತ್ರಕರ್ತನೋರ್ವ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದರು. ಅದಾದ ಬಳಿಕ ಏಮ್ಸ್​ನ ಮನಃಶಾಸ್ತ್ರ ವಿಭಾಗದಲ್ಲಿ ಟ್ರೇನಿಂಗ್ ಪಡೆಯುತ್ತಿದ್ದ ಕಿರಿಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದೀಗ ಮತ್ತೋರ್ವ ರೋಗಿ ಏಮ್ಸ್​ ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ವರದಿಯಾಗಿದೆ. ಮೃತ ರೋಗಿಯನ್ನು ರಾಜಮಣಿ ಸತ್ತರ್​ ಎಂದು ಗುರುತಿಸಲಾಗಿದ್ದು, ಇವರು ಸ್ನಾನದ ಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: 8 ವರ್ಷದಲ್ಲಿ ಕಟ್ಟಿದ ಸೇತುವೆ ಒಂದು ತಿಂಗಳೂ ಉಳಿಯಲಿಲ್ಲ; ಕುಸಿದುಬಿದ್ದ ಬೆನ್ನಲ್ಲೇ ಸಿಎಂ ವಿರುದ್ಧ ಆಕ್ರೋಶ

ಈ ರೋಗಿ ತುಂಬ ದಿನಗಳಿಂದಲೂ ಚಿಕಿತ್ಸೆ ಪಡೆಯುತ್ತಿದ್ದರು. ಸ್ವಲ್ಪ ಖಿನ್ನತೆಗೆ ಒಳಗಾಗಿದ್ದರು. ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೇ, ಯಾವುದೇ ಸೂಸೈಡ್​ ನೋಟ್​ ಕೂಡ ಸಿಕ್ಕಿಲ್ಲ.

ಇಂದು ಮುಂಜಾನೆ ವಾರ್ಡ್​ಗೆ ಬಂದ ಆಸ್ಪತ್ರೆ ಸಿಬ್ಬಂದಿಗೆ ಈತ ನೇಣು ಬಿಗಿದುಕೊಂಡಿದ್ದು ಗೊತ್ತಾಗಿದೆ. ಪೊಲೀಸರು ಆಸ್ಪತ್ರೆ ಸಿಬ್ಬಂದಿ, ರೋಗಿಯ ಸಂಬಂಧಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net