

ಗದಗ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ರಘು ಗೋಕಾಕ್ (34) ಮೃತ ರೋಗಿ. ಇವರು ಗದಗ ನಗರ ನಿವಾಸಿಯಾಗಿದ್ದು, 15 ದಿನಗಳಿಂದ ಲಿವರ್ ವೈಫಲ್ಯದಿಂದ ಬಳಲುತ್ತಿದ್ದರು. ಜಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ವಾರ್ಡ್ನಲ್ಲಿದ್ದ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)