ಬಿಹಾರದಲ್ಲಿ ಸಿಡಿಲು ಬಡಿದು 8 ಮಂದಿ ಸಾವು

sidlu
Published on

ಪಾಟ್ನಾ: ಬಿಹಾರದ ನಾಲ್ಕು ಜಿಲ್ಲೆಗಳಲ್ಲಿ ಹಿಂದಿನ 24 ಗಂಟೆಗಳಲ್ಲಿ ಸಿಡಿಲು ಬಡಿದು 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯ ರಾಜಧಾನಿ ಪಾಟ್ನಾ ಮತ್ತು ಔರಂಗಾಬಾದ್‌ನಲ್ಲಿ ತಲಾ ಮೂವರು, ನವಾಡ ಮತ್ತು ಸರನ್‌ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರ ಕುಟುಂಬಗಳಿಗೆ ತಲಾ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆಗಳನ್ನು ಪಾಲನೆ ಮಾಡುವಂತೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಸಿಡಿಲು ಬಡಿದ ಪರಿಣಾಮ ಗುರುವಾರ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ ಮುಂದಿನ 36 ಗಂಟೆ ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ ಬೀಳಲಿದೆ ಎಂದು ಶುಕ್ರವಾರ ಮುನ್ಸೂಚನೆ ನೀಡಿದೆ.

ಅಲ್ಲದೇ, ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯದ ಬಹುತೇಕ ಭಾಗದ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಇಂದು ಇಲಾಖೆ ಎಚ್ಚರಿಕೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net