ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾವಿಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿಎಂ

Sudhee_01_Patrika_Dina_@_PCB (3)
Published on

ಬೆಂಗಳೂರು:
ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಹಾಗೂ ಮಾಧ್ಯಮ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಫೇಕ್ ನ್ಯೂಸ್‌ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದರು.
ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ.
ಫೇಕ್ ನ್ಯೂಸ್‌ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ್ಯಾಕ್ಟ್ ಚೆಕ್ ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು.
ಐದಾರು ತಿಂಗಳು ಮೊಬೈಲ್ ಬಳಸಿದೆ. ರಾತ್ರಿ ಹೊತ್ತು ನಿದ್ದೆ ಬರುತ್ತಿರಲಿಲ್ಲ. ಹಾಗಾಗಿ ನಾನು ಮೊಬೈಲ್ ಬಳಸುವುದನ್ನು ಬಿಟ್ಟುಬಿಟ್ಟೆ ಎಂದು ಹೇಳಿದರು.
ತಂತ್ರಜ್ಞಾನವನ್ನು ಬಳಸಿಕೊಂಡು ಮಾಧ್ಯಮಗಳು ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕು. ಸತ್ಯದ ಸಂಗತಿಗಳನ್ನು ಜನರಿಗೆ ತಿಳಿಸಲು ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣಗಳ ಬಗ್ಗೆ ಮಾತನಾಡಿದ ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್, ಗಾಸಿಪ್, ರೂಮರ್‌ಗಳನ್ನು ಹರಡುವುದು, ಸತ್ಯ ಮರೆ ಮಾಚಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಪತ್ರಿಕೋದ್ಯಮವಲ್ಲ. ಜನರ ಧ್ವನಿಯಾಗಿ ನೈಜ ವರದಿ ಮಾಡುವುದು, ಸತ್ಯದ ಸಂಗತಿಗಳನ್ನು ಜನರಿಗೆ ತಿಳಿಸುವುದು ಸರಿಯಾದ ಪತ್ರಿಕೋದ್ಯಮ ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ನಿವೇಶನ, ಮನೆಗಳನ್ನು ನೀಡಬೇಕು. ಆರೋಗ್ಯ ಯೋಜನೆ ಜಾರಿಗೆ ನೀಡಬೇಕು. ಬಸ್ ಪಾಸ್ ೋಷಣೆ ಮಾಡಿರುವುದನ್ನು ಜಾರಿಗೆ ತರಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್, ವಿಕಾಸ್ ಕಿಶೋರ್, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಬಿ.ಪಿ.ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net