ಕಬ್ಬಿನ ಬಾಕಿ ಹಣವನ್ನು ಕೂಡಲೇ ಪಾವತಿಸಿ

ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆಯಲ್ಲಿ ಕಬ್ಬಿನ ಬಾಕಿ ಪಾವತಿಸುವ ಕುರಿತು ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಯ ಪ್ರತಿನಿಽಗಳೊಂದಿಗೆ ಸಭೆ ನಡೆಯಿತು. ಜಿಲ್ಲಾಽಕಾರಿ ಸಂಗಪ್ಪ, ಜಿಪಂ ಸಿಇಒ ಗಜಾನನ ಬಾಲೆ, ಎಸ್ಪಿ ಸಿದ್ಧಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಽಕಾರಿ ಸ್ವಪ್ನಿಲ್ ಅಹೀರೆ ಇತರರು ಇದ್ದರು.
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆಯಲ್ಲಿ ಕಬ್ಬಿನ ಬಾಕಿ ಪಾವತಿಸುವ ಕುರಿತು ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಯ ಪ್ರತಿನಿಽಗಳೊಂದಿಗೆ ಸಭೆ ನಡೆಯಿತು. ಜಿಲ್ಲಾಽಕಾರಿ ಸಂಗಪ್ಪ, ಜಿಪಂ ಸಿಇಒ ಗಜಾನನ ಬಾಲೆ, ಎಸ್ಪಿ ಸಿದ್ಧಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಽಕಾರಿ ಸ್ವಪ್ನಿಲ್ ಅಹೀರೆ ಇತರರು ಇದ್ದರು.
Published on
ಬಾಗಲಕೋಟೆ: ರೈತರಿಗೆ ಪಾವತಿಸಬೇಕಾದ ಯಾವುದೇ ಹಣವನ್ನು ವಿಳಂಬ ಮಾಡದೆ, ಕೂಡಲೇ ಪಾವತಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಯ ಪ್ರತಿನಿಽಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ ೨೦೨೫-೨೬ನೇ ಸಾಲಿನಲ್ಲಿ ರೈತರಿಗೆ ಪಾವತಿಸಬೇಕಾದ ಕಬ್ಬಿನ ಬಾಕಿ ಹಣವನ್ನು ಕೆಲವೊಂದು ಕಾರ್ಖಾನೆಗಳು ಇನ್ನೂ ಏಕೆ ಪಾವತಿಸಿಲ್ಲ. ಬಾಕಿ ಪಾವತಿಗೆ ಕೂಡಲೇ ಕ್ರಮಕೈಗೊಳ್ಳುವಂತೆ ಸಚಿವರು ತಿಳಿಸಿದರು.
ವಿವಿಧ ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಉಳಿದಿರುವ ಹಣದ ಕುರಿತು ವಿವರವಾದ ಮಾಹಿತಿ ಪಡೆದುಕೊಂಡ ಅವರು ಕಳೆದ ೨೦೨೫-೨೬ನೇ ಹಂಗಾಮಿಗೆ ಕಬ್ಬು ಪೂರೈಸಿದ ರೈತರಿಗೆ ಜಮಖಂಡಿ ಶುರ‍್ಸ್ ಹೊರತುಪಡಿಸಿ ಉಳಿದೆಲ್ಲ ಕಾರ್ಖಾನೆಗಳು ಬಿಲ್ ಪಾವತಿಸಿದ್ದಾರೆ. ಸರ್ಕಾರದಿಂದ ೫೦ ರೂ.ಗಳ ಪಾವತಿಸಬೇಕಾದ ಮೊತ್ತ ಸಂಪೂರ್ಣವಾಗಿ ಪಾವತಿಯಾಗಿದೆ. ಆದರೆ, ಕಾರ್ಖಾನೆಯವರು ತಮ್ಮ ಪಾಲಿನಿಂದ ನೀಡಬೇಕಾದ ಪ್ರತಿ ಮೆಟ್ರಿಕ್ ಟನ್ ೫೦ ರೂ.ಗಳ ಬಾಕಿಯನ್ನು ಹಣವನ್ನು ೬ ಕಾರ್ಖಾನೆಗಳು ಪಾವತಿಸಿರುವುದಿಲ್ಲ. ಕೂಡಲೇ ಪಾವತಿಸುವಂತೆ ಸೂಚನೆ ನೀಡಿದರು.
ಪ್ರಸಕ್ತ ಕಬ್ಬು ಹಂಗಾಮಿಗೆ ರೈತರಿಗೆ ನೀಡಬೇಕಾದ ಕಬ್ಬಿನ ದರದ ಕುರಿತು ಸಕ್ಕರೆ ಕಾರ್ಖಾನೆಗಳು ಅಗತ್ಯ ಮಾಹಿತಿ ನೀಡುವ ಕೆಲಸವನ್ನು ಮಾಡಬೇಕು. ಮೊದಲು ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಇರುವ ಹಣವನ್ನು ಸಂಪೂರ್ಣವಾಗಿ ಪಾವತಿಸಬೇಕು. ನಂತರ ರೈತರ ಸಭೆಯನ್ನು ಕರೆದು ಪ್ರಸಕ್ತ ಹಂಗಾಮಿನ ಕಬ್ಬಿನ ದರ ನಿಗದಿಪಡಿಸುವ ಕುರಿತು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಿಎಸ್‌ಆರ್ ಅನುದಾನದಡಿ ೬೦ ಶಾಲೆಗಳ ಅಭಿವೃದ್ಧಿಗೆ ಕ್ರಮ:
ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಸಾಮಾಜಿಕ ಹೊಣೆಗಾರಿಕೆ ನಿಽ (ಸಿಎಸ್‌ಆರ್) ಅಡಿಯಲ್ಲಿ ಜಿಲ್ಲೆಯ ೬೦ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಹ ಚರ್ಚಿಸಲಾಯಿತು. ಜಿಲ್ಲೆಯ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ, ಅಗತ್ಯ ಸೌಲಭ್ಯ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಗಳು ತಮ್ಮ ಸಿಎಸ್‌ಆರ್ ನಿಽಯನ್ನು ಪರಿಣಾಮಕಾರಿಯಾಗಿ ಬಳಸಬೇಕು ಎಂದು ಸಚಿವರು ಸೂಚಿಸಿದರು.
ಜಿಲ್ಲೆಗೆ ೬೦ ಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರತಿ ಕಾರ್ಖಾನೆಯು ತಮಗೆ ವಹಿಸಲಾದ ಶಾಲೆಗಳ ಅಭಿವೃದ್ಧಿ ಕಾರ್ಯಗಳನ್ನು ಆದ್ಯತೆಯ ಮೇರೆಗೆ ಕೈಗೊಂಡು, ಅಭಿವೃದ್ಧಿಗೆ ಕ್ರಮವಹಿಸಬೇಕು. ಜಿಲ್ಲೆಯ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಕ್ಕರೆ ಕಾರ್ಖಾನೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕೈಜೋಡಿಸಬೇಕು ಎಂದು ಹೇಳಿದ ಅವರು ಕಳೆದ ಸಾಲಿನಲ್ಲಿ ಸಿಎಸ್‌ಆರ್‌ರಡಿ ಕೈಗೊಂಡ ಕಾರ್ಯಕ್ರಮಗಳ ವರದಿಯನ್ನು ಸಹ ನೀಡುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಽಕಾರಿ ಸಂಗಪ್ಪ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧೊಕಾರಿ ಸಿದ್ದಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಽಕಾರಿ ಸ್ವಪ್ನಿಲ್ ಅಹೀರೆ, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಜಿಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ಉಪ ವಿಭಾಗಾಽಕಾರಿಗಳಾದ ಕ್ಯಾಪ್ಟನ ಮಹೇಶ ಮಾಲಗಿತ್ತಿ, ಶ್ವೇತಾ ಬೀಡಿಕರ ಸೇರಿದಂತೆ ಇತರೆ ಅಽಕಾರಿಗಳು ಹಾಗೂ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಯ ಪ್ರತಿನಿಽಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net