PDO of the Month Award ಕುಂದರಗಿ ಗ್ರಾಪಂನ ರವಿ ಪಟಗಾರ ಅವರಿಗೆ ಪ್ರದಾನ

PDO of the Month Award
Published on

ಕಾರವಾರ : ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೀಡುವ  PDO of the Month Award ಯಲ್ಲಾಪುರ ತಾಲೂಕಿನ

ಕುಂದರಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಪಟಗಾರ ಅವರಿಗೆ ಸಂದಿದೆ.

ಜಿಪಂ ವತಿಯಿಂದ ಗ್ರಾಮೀಣ ಪ್ರದೇಶದ ಜನರ ಸಂಕಷ್ಟಗಳಿಗೆ ಸ್ಪಂದಿಸಿ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅತ್ಯುತ್ತಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಗುರುತಿಸಿ, ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ ನೀಡಲಾಗುತ್ತದೆ.   ನವೆಂಬರ್ ತಿಂಗಳ ಪ್ರಶಸ್ತಿಯು ಯಲ್ಲಾಪುರ ತಾಲೂಕಿನ ಕುಂದರಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಪಟಗಾರ ಅವರಿಗೆ ಸಂದಿದೆ.

PDO of the Month Award ಎಲ್ಲಿ ಪ್ರದಾನ

ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಪ್ರಮಾಣ ಪತ್ರ ನೀಡಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಯೋಜನಾ

ನಿರ್ದೇಶಕ ಕರೀಂ ಅಸಾದಿ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ ಯೋಜನಾಧಿಕಾರಿ ವಿನೋದ

ಅಣ್ವೇಕರ್, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ, ಕುಮಟಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಭಟ್ ಸೇರಿದಂತೆ

ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net