

ಬೆಳಗಾವಿ
ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಪೈಕಿ 2,120 ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದ್ದು, ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನ ಪರಿಷತ್‌ಗೆ ತಿಳಿಸಿದರು.
ಬೆಳಗಾವಿ: ಪ್ರಸ್ತುತ ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಅನುದಾನದ ಲಭ್ಯತೆ ಆಧರಿಸಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿರದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದು ವಿಧಾನ ಪರಿಷಗತ್ ಸಭಾನಾಯಕ ಎನ್.ಎಸ್. ಭೋಷರಾಜು ತಿಳಿಸಿದರು.
ಕಾಂಗ್ರೆಸ್‌ನ ಎಂ.ಎಲ್. ಅನಿಲ್‌ಕುಮಾರ ಪ್ರಶ್ನೋತ್ತರ ವೇಳೆ, ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದರು. ಕೇಂದ್ರದ ನೀತಿ ಆಯೋಗದನ್ವಯ ಸರ್ಕಾರಿ ವೈದ್ಯಕೀಯ ಕಾಲೇಜುಗಳಿರದ ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಹೊಸ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರದಿಂದಲೇ ವೈದ್ಯಕೀಯ ಕಾಲೇಜು ತೆರೆಯುವ ಬಗ್ಗೆ ೋಷಣೆ ಮಾಡಿಲ್ಲ ಎಂದರು.
ಸಚಿವರು ಗೈರು:
ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಲವು ಸಚಿವರು ಗೈರಾಗಿದ್ದರು. ಸಚಿವ ಬದಲಿಗೆ ಸಭಾನಾಯಕ ಎನ್.ಎಸ್. ಭೋಷರಾಜು ಉತ್ತರಿಸುತ್ತಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಆಗ ಸಭಾಪತಿ ಬಸವರಾಜ ಹೊರಟ್ಟಿ ಮಧ್ಯ ಪ್ರವೇಶಿಸಿ, ಸಚಿವರು ಪೂರ್ವ ನಿರ್ಧರಿತ ಕಾರಣ ನೀಡಿ ಸನಕ್ಕೆ ಗೈರಾಗಿದ್ದಾರೆ. ಮುಂದೆ ಹೀಗಾಗಬಾರದು ಎಂದು ತಾಕೀತು ಮಾಡಿದರು.