ಮಹಿಳೆ ತಲೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪಾನಮತ್ತ ಟಿಟಿಇ!

ಆಧಧಾಶ
Published on

ಲಖನೌ: ಕುಡಿದ ಅಮಲಿನಲ್ಲಿ ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಅಕಾಲ್ ತಖ್ ಎಕ್ಸ್‌ಪ್ರೆಸ್‌ನಲ್ಲಿ ಭಾನುವಾರ ಮಹಿಳೆಯ ತಲೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಮಹಿಳೆ ತನ್ನ ಪತಿ ರಾಜೇಶ್ ಕುಮಾರ್ ಜೊತೆ ಪ್ರಯಾಣಿಸುತ್ತಿದ್ದರು. ಇಬ್ಬರೂ ಅಮೃತಸರ ಮೂಲದವರಾಗಿದ್ದಾರೆ. ಅಮೃತಸರದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಅಕಲ್ ತಬ್ ಎಕ್ಸ್‌ಪ್ರೆಸ್‌ನ ಎ1 ಕೋಚ್‌ನಲ್ಲಿ ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಈ ಭೂಪ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿದ್ದಂತೆಯೇ ಅವರು ಚೀರಿದ್ದಾರೆ. ಮಹಿಳೆಯ ಚೀರಾಟ ಕೇಳಿದ ಸುತ್ತಮುತ್ತ ಜಮಾಯಿಸಿದ ಪ್ರಯಾಣಿಕರು ಕುಡಿದ ಮತ್ತಿನಲ್ಲಿದ್ದ ಟಿಟಿಇಯನ್ನು ಮೂತ್ರ ವಿಸರ್ಜಿಸುತ್ತಿರುವುದನ್ನು ಕಂಡಿದ್ದಾರೆ. ಈತನನ್ನು ಬಿಹಾರದ ನಿವಾಸಿ ಮುನ್ನಾ ಕುಮಾರ್ ಎಂದು ಗುರುತಿಸಲಾಗಿದೆ. ಸೋಮವಾರ ರೈಲು ಲಖನೌದ ಚಾರ್‌ಬಾಗ್‌ ರೈಲು ನಿಲ್ದಾಣವನ್ನು ತಲುಪಿದಾಗ ಟಿಟಿಇಯನ್ನು ಜಿಆರ್‌ಪಿಗೆ ಹಸ್ತಾಂತರಿಸಲಾಯಿತು. ಟಿಟಿಇ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net