ಪೆನ್‌ಡ್ರೈವ್ ಪ್ರಕರಣ ಸಿಬಿಐಗೆ ಒಪ್ಪಿಸಿ

jds manavi
ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ತಾಲೂಕು ಜೆಡಿಎಸ್ ಕಾರ್ಯಕರ್ತರು ಶಿರಸ್ತೇದಾರ್‌ಗೆ ಮನವಿ ಸಲ್ಲಿಸಿದರು. ಕಿರಣ್ ಪ್ರಭಾಕರ್, ಪ್ರವೀಣ್, ರವಿ ಗೌಡ, ಗುರುದತ್, ಈರಣ್ಣ, ಅಶೋಕ್ ಇತರರಿದ್ದರು.
Published on

ತೀರ್ಥಹಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ತಾಲೂಕು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ರಸ್ತೆತಡೆ ನಡೆಸಿ ಶಿರಸ್ತೇದಾರ್‌ಗೆ ಮನವಿ ಸಲ್ಲಿಸಿದರು.

ಅಶ್ಲೀಲ ವಿಡಿಯೋ ತುಣುಕುಗಳನ್ನು ಸೋರಿಕೆ ಮಾಡಿ ಮಹಿಳೆಯರ ಗೌರವ ಹಾಳು ಮಾಡುವಲ್ಲಿ ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡವಿದೆ. ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪಕ್ಷದ ತಾಲೂಕು ಅಧ್ಯಕ್ಷ ಕುಣಜೆ ಕಿರಣ್ ಪ್ರಭಾಕರ್ ಮತ್ತು ರಾಮಸ್ವಾಮಿ ಮೇಧೋಳಿಗೆ ಆಗ್ರಹಿಸಿದರು.
ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣವನ್ನು ಕಾಂಗ್ರೆಸ್ ಪಕ್ಷವು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಕುಟುಂಬದ ತೇಜೋವಧೆ ಮಾಡಲು ದುರ್ಬಳಕೆ ಮಾಡಿಕೊಂಡಿದೆ. ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದೂ ಆಗ್ರಹಿಸಿದರು.
ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯರ ಅಶ್ಲೀಲ ವಿಡಿಯೋಗಳು ಬಹಿರಂಗವಾದ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಪಿತೂರಿ ಇರುವುದು ದೇವರಾಜೇಗೌಡ ಮತ್ತು ಡಿಕೆಶಿ ನಡುವಿನ ಸಂಭಾಷಣೆಯಲ್ಲೇ ಬಹಿರಂಗವಾಗಿದೆ. ಸಂತ್ರಸ್ತ ಮಹಿಳೆಯರ ಕುಟುಂಬದ ಘನತೆಗೆ ಧಕ್ಕೆಯಾಗುವಂತೆ ಸಾವಿರಾರು ಪೆನ್‌ಡ್ರೈವ್‌ಗಳನ್ನು ಹಂಚಲು ಕಾರಣನಾದ ನವೀನ್ ಗೌಡ ಮತ್ತಿತರ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.
ಕುಂದಾ ಪ್ರವೀಣ್, ರವಿ ಗೌಡ, ಗುರುದತ್, ಈರಣ್ಣ, ಅಶೋಕ್ ನಂತೂರು, ವಿನಯ್ ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net