ಕಾವೇರಿ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

kaveri river
Published on

ಮೈಸೂರು: ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 50,000 ರಿಂದ 80,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು.

ಈ ಪ್ರಮಾಣವು ಹೆಚ್ಚಾಗುವ ಸಂಭವವಿದ್ದು, ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವುಂತೆ ಕೋರಲಾಗಿದೆ ಎಂದು ಕಾ.ನೀ.ನಿ.ನಿ., ಕೃಷ್ಣರಾಜಸಾಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net