10 ದಿನದೊಳಗೆ ಶೇ. 100ರಷ್ಟು ಗುರಿ ಸಾಧಿಸಿ: ಸಚಿವ ಮಧು ಬಂಗಾರಪ್ಪ

Grihalakshmi yojane
ಅಂಬೇಡ್ಕರ್ ಭವನದಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಟಾನ ಕಾರ್ಯಕ್ರಮವನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಆರ್.ಪ್ರಸನ್ನಕುಮಾರ್, ಎಚ್.ಸಿ.ಯೋಗೇಶ್,ಎಚ್.ಎಸ್.ಸುಂದರೇಶ್, ಡಾ. ಆರ್.ಸೆಲ್ವಮಣಿ, ಜಿ.ಕೆ.ಮಿಥುನ್‌ಕುಮಾರ್, ಸತ್ಯನಾರಾಯಣ್, ಸಂತೋಷ್‌ಕುಮಾರ್, ಡಾ. ಎನ್.ಜೆ.ನಾಗರಾಜ್ ಇದ್ದರು.
Published on

ಶಿವಮೊಗ್ಗ: ಜಿಲ್ಲೆಯಲ್ಲಿ ಈವರೆಗೆ 3,60,294 ಮಹಿಳೆಯರು ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾಗಿದೆ. ಇನ್ನೂ 32,000 ಮಹಿಳೆಯರ ನೋಂದಣಿ ಬಾಕಿ ಇದ್ದು ಇನ್ನು 7ರಿಂದ 10 ದಿನದೊಳಗೆ ಈ ಬಾಕಿ ನೊಂದಣಿ ಮಾಡಿಸಿ ಶೇ.100 ಗುರಿ ತಲುಪಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಟಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೋಂದಣಿಯಾದ ಫಲಾನುಭವಿಗಳು ತಮ್ಮ ಅಕ್ಕಪಕ್ಕದವರಿಗೆ ಈ ಬಗ್ಗೆ ತಿಳಿಸಿ ಸಹಕರಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಈ ಬಗ್ಗೆ ಮಾನಿಟರಿಂಗ್ ಮಾಡಬೇಕು ಎಂದು ಸೂಚಿಸಿದರು.
ಮನೆಯ ಯಜಮಾನಿಗೆ ಸರ್ಕಾರ ರಕ್ಷಾ ಬಂಧನದ ದಿನದಂದು ಸಹೋದರನ ಸ್ಥಾನದಲ್ಲಿ ನಿಂತು ಗ್ಯಾರಂಟಿಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡುತ್ತಿದೆ. ಚುನಾವಣಾ ಪೂರ್ವದಲ್ಲಿ ಕೊಟ್ಟ ಗ್ಯಾರಂಟಿ ಭರವಸೆಗಳಲ್ಲಿ ಈಡೇರಿಸುತ್ತಿದೆ. ಮುಂದೆಯೂ ಸರ್ಕಾರ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net