

ಚೆನ್ನೈ: ಬೈಕ್ಗೆ ಪಟಾಕಿಯನ್ನು ಕಟ್ಟಿ ಯುವಕನೊಬ್ಬ ನಡುರಸ್ತೆಯಲ್ಲೇ ಅಪಾಯಕಾರಿ ಬೈಕ್ ಸ್ಟಂಟ್ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಘಟನೆ ತಮಿಳುನಾಡಿನ ತಿರುಚಿಯಲ್ಲಿದೆ.
ವಿಡಿಯೋವನ್ನು ನವೆಂಬರ್ 9ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದ್ದು, ಈವರೆಗೆ ಲಕ್ಷಾಂತರ ವೀಕ್ಷಣೆಯನ್ನು ಕಂಡಿದ್ದು, ರಸ್ತೆಯಲ್ಲಿ ಸಾಹಸ ಪ್ರದರ್ಶಿಸಿ ಪ್ರಯಾಣಿಕರಿಗೆ ಮತ್ತು ಪಾದಚಾರಿಗಳಿಗೆ ಅಪಾಯವನ್ನುಂಟು ಮಾಡಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವಕರು ಬೈಕ್‌ನ ಹೆಡ್‌ಲೈಟ್‌ಗೆ ಪಟಾಕಿಗಳನ್ನು ಕಟ್ಟುತ್ತಿರುವುದನ್ನು ತೋರಿಸುವ ಮೂಲಕ ವಿಡಿಯೋ ಪ್ರಾರಂಭವಾಗುತ್ತದೆ. ಇದಾದ ಬಳಿಕ ಹೆಡ್‌ಲೈಟ್‌ಗೆ ಕಟ್ಟಿದ್ದ ಪಟಾಕಿಗಳನ್ನು ಸಿಡಿಸುವ ಮೂಲಕ ಯುವಕರು ಬೈಕ್‌ನಲ್ಲಿ ಸಾಹಸ ಪ್ರದರ್ಶಿಸುತ್ತಿರುವುದು ಕಂಡು ಬರುತ್ತದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ವಿಡಿಯೋವನ್ನು 'ಡೆವಿಲ್ ರೈಡರ್' ಹೆಸರಿನ ಇನ್‌ಸ್ಟಾಗ್ರಾಮ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ. ಈ ಪೇಜ್ ಅನ್ನು ಕೇಂದ್ರೀಕರಿಸಿ ತನಿಖೆ ನಡೆಸಿದ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಯುವಕನ ವಿರುದ್ಧ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)