ಅನುಮತಿ ವಿಳಂಬ, ಸಿಎಂ ಎಚ್ಚರಿಕೆ

vidhanasoudha
Published on

ಬೆಂಗಳೂರು: ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಕುರಿತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದರು.

ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು. ತ್ವರಿತ ತೀರ್ಮಾನ ಕೈಗೊಂಡು ಲೋಕಾಯುಕ್ತರಿಗೆ ಆದೇಶಗಳನ್ನು ಕಳುಹಿಸುವಂತೆ ಸೂಚನೆ ನೀಡಿದರು.

ಎಲ್ಲ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ, ಲೋಕಾಯುಕ್ತಕ್ಕೆ ಕಳುಹಿಸುವಂತೆ ಸೂಚನೆ ನೀಡಿದ ಅವರು ವಿಳಂಬ ಧೋರಣೆಯಿಂದ ಜನತೆಗೆ ತಪ್ಪು ಸಂದೇಶ ಹೋಗಬಹುದು. ಆದ್ದರಿಂದ ಕೂಡಲೇ ಕ್ರಮಕೈಗೊಳ್ಳಿ ಎಂದು ತಾಕೀತು ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net