ಭವಿಷ್ಯದ ಕನಸು ಸಾಕಾರಗೊಳಿಸಲು ಪರಿಶ್ರಮ ಅಗತ್ಯ

ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ  ಮತ್ತು  ಅವರ ಪೋಷಕರಿಗೆ ಆಯೋಜಿಸಿದ ಓರಿಯಂಟೇಶನ್-2026 ಕಾರ್ಯಕ್ರ
ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಆಯೋಜಿಸಿದ ಓರಿಯಂಟೇಶನ್-2026 ಕಾರ್ಯಕ್ರ
Published on
ಮಂಗಳೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ದೊಡ್ಡ ಕನಸುಗಳನ್ನು ಕಾಣಬೇಕು ಹಾಗೂ ಅವುಗಳನ್ನು ಸಾಕಾರಗೊಳಿಸುವ ಉತ್ಸಾಹ ಮತ್ತು ಪರಿಶ್ರಮವನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿ ತನ್ನೊಳಗಿನ ಸಾಮರ್ಥ್ಯವನ್ನು ಗುರುತಿಸಿಕೊಂಡು ಪರಿಶ್ರಮ ಮತ್ತು ನಿರಂತರ ಕಲಿಕೆಯ ಮೂಲಕ ಕನಸುಗಳನ್ನು ಾಧನೆಯಾಗಿ ಪರಿವರ್ತಿಸಬೇಕು ಎಂದು ಎಕ್ಸ್‌ಪರ್ಟ್ ಶಿಕ್ಷಣ ಮತ್ತು ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್ ನಾಯಕ್ ಹೇಳಿದರು.
ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಆಯೋಜಿಸಿದ ಓರಿಯಂಟೇಶನ್-2026 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಯವನ್ನು ಸದುಪಯೋಗಪಡಿಸಿಕೊಂಡು ಶಿಸ್ತು, ಪ್ರಾಮಾಣಿಕತೆ ಮತ್ತು ವಿನಯದಂತಹ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಉತ್ತಮ ಶಿಕ್ಷಣ ಮತ್ತು ಜೀವನಾನುಭವದ ನಿರ್ಮಾಣದಲ್ಲಿ ಪೋಷಕರು, ಶಿಕ್ಷಣ ಸಂಸ್ಥೆ ಹಾಗೂ ವಿದ್ಯಾರ್ಥಿಗಳ ಸಮನ್ವಯ ಅತ್ಯಂತ ಮಹತ್ತ್ವದ್ದಾಗಿದೆ. ಪ್ರತಿದಿನ ಹೊಸ ವಿಷಯಗಳನ್ನು ಕಲಿಯುವ ಆಸಕ್ತಿ ಮತ್ತು ಪರಿಶ್ರಮ ಬೆಳೆಸಿಕೊಂಡಾಗ ಆತ್ಮವಿಶ್ವಾಸದಿಂದ ಸಮಾಜವನ್ನು ಮುನ್ನಡೆಸುವ ನಾಯಕರಾಗುತ್ತಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಜ್ಞಾನ ಮತ್ತು ಮೌಲ್ಯಗಳ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದರು.
ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್ ಮಾತನಾಡಿ, ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಹೊಂದಿರಬೇಕು. ಗುರಿಯಿಲ್ಲದ ಓಟವು ಯಾವುದೇ ಫಲ ನೀಡುವುದಿಲ್ಲ. ವಿನಯತೆ, ಪ್ರಾಮಾಣಿಕತೆ ಹಾಗೂ ಶಿಸ್ತು ಎಂಬ ಮೌಲ್ಯಗಳು ವಿದ್ಯಾರ್ಥಿ ಜೀವನದ ಭದ್ರ ಅಡಿಪಾಯವಾಗಿದ್ದು, ಈ ಗುಣಗಳು ವ್ಯಕ್ತಿತ್ವವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತವೆ ಎಂದರು.
ಕಾಲೇಜಿನ ಶೈಕ್ಷಣಿಕ ಸಮಿತಿಯ ಸದಸ್ಯ ಬಿ. ವಿನಯ್ ಕುಮಾರ್ ಇವರು ಶೈಕ್ಷಣಿಕ ಯೋಜನೆ, ಅಧ್ಯಯನ ವಿಧಾನ ಹಾಗೂ ವಿವಿಧ ಶೈಕ್ಷಣಿಕ ಅವಕಾಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಎ.ಐ.ಸಿ.ಇ. ವಿಭಾಗದ ಸಂಯೋಜಕ ಶ್ಯಾಮ್ ಪ್ರಸಾದ್, ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಮಚಂದ್ರ ಭಟ್, ಕಾರ್ಯಕ್ರಮದ ಸಂಯೋಜಕಿ ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ರಾಧಿಕಾ ಭಟ್ ಹಾಗೂ ಇತರ ಉಪನ್ಯಾಸಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಉಜ್ವಲ್ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಭರತ್‌ಚಂದ್ರ ಎಲ್ ವಂದಿಸಿದರು.
-----------------
ಮಕ್ಕಳ ಯಶಸ್ಸಿನ ಹಿಂದೆ ಪೋಷಕರ ತ್ಯಾಗ, ಪ್ರೋತ್ಸಾಹ ಮತ್ತು ನಿರಂತರ ಬೆಂಬಲ ಅಡಗಿದ್ದು, ವಿದ್ಯಾರ್ಥಿಗಳು ಅದನ್ನು ಗೌರವಿಸಿ ತಮ್ಮ ಗುರಿಗಳತ್ತ ಸಮರ್ಪಣಾ ಭಾವದಿಂದ ಇರಬೇಕು. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಅಧ್ಯಯನ ಕೌಶಲ್ಯಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನದತ್ತ ಗಮನ ಹರಿಸಬೇಕು.
-ಡಾ.ಉಷಾಪ್ರಭಾ ಎನ್. ನಾಯಕ್,
ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ
-------------------
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net