ಪಕ್ಷ ನಿಷ್ಠೆಗಿಂತ ಈಗ ವೈಯಕ್ತಿಕ ಲಾಭವೇ ಮುಖ್ಯವಾಗಿದೆ: ಕುಮಾರಸ್ವಾಮಿ

ayanuru manjunath
Published on

ಬೆಂಗಳೂರು: ಹೋಗುವವರನ್ನು ಹಿಡಿದುಕೊಳ್ಳಲು ಆಗುತ್ತಾ? ಕೆಲವರಿಗೆ ಈಗೆಲ್ಲ ಪಕ್ಷ ನಿಷ್ಠೆಗಿಂತ ವೈಯಕ್ತಿಕ ಲಾಭವೇ ಮುಖ್ಯವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಜರಗನಹಳ್ಳಿಯಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳು, ಮಾಜಿ ಶಾಸಕ ಆಯನೂರು ಮಂಜುನಾಥ್ ಮತ್ತು ಡಿ.ಕೆ.ಶಿವಕುಮಾರ್ ಭೇಟಿ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು.

ಇತ್ತೀಚೆಗೆ ಪಕ್ಷ ನಿಷ್ಠೆ ಕಡಿಮೆ ಆಗಿದೆ. ಆಯನೂರು ಬಗ್ಗೆ ಇನ್ನೇನು ಹೇಳಲಾರೆ ಎಂದು ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ನವರು ಎಲ್ಲ ಪಕ್ಷಗಳ ಶಾಸಕರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮದೂ ಅವಕಾಶವಾದಿ ರಾಜಕಾರಣವೇ ಎಂದು ಅವರೇ ಹೇಳಿಲ್ಲವೇ? ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? ಎಂದು ಅವರೇ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದರು.

ಮಾಜಿ ಶಾಸಕ ಸಿ.ಎಸ್. ಪುಟ್ಟರಾಜು ಕಾಂಗ್ರೆಸ್ ಸೇರ್ಪಡೆ ವದಂತಿ ವಿಚಾರದ ಬಗ್ಗೆಯೂ ಮಾತನಾಡಿದ ಅವರು, ಪದೆಪದೇ ಪುಟ್ಟರಾಜು ಅವರ ಹೆಸರು ಯಾಕೆ ಹೇಳುತ್ತಿದ್ದಾರೆ? ತಮ್ಮ ತಪ್ಪುಗಳನ್ನು ಮರೆಮಾಚಿಕೊಳ್ಳಲು. ನಮ್ಮ ಹುಳುಕು ಮುಚ್ಚಿಟ್ಟುಕೊಳ್ಳಲು ಕಾಂಗ್ರೆಸ್‌ನವರು ಇಂಥ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಕುಟುಕಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net