ಅಂತ್ಯಕ್ರಿಯೆಗೆ ಶಾಸಕರು ಬರಬೇಕು ಅಂತ ಪತ್ರ ಬರೆದಿಟ್ಟು ಪ್ರಾಣ ಬಿಟ್ಟ ಭೂಪ…!

suicide
Published on

ದಾಬಸ್‌ಪೇಟೆ: ನನ್ನ ಅಂತ್ಯಸಂಸ್ಕಾರಕ್ಕೆ ಗುಬ್ಬಿ ಕ್ಷೇತ್ರದ ಶಾಸಕರು ಬರಬೇಕು ಹಾಗೂ ನನ್ನ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಡೆತ್‌ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗ್ರಾನೈಟ್ ಕೆಲಸ ಮಾಡುತ್ತಿದ್ದ ಕೂಲಿಕಾರ್ಮಿಕ, ತುಮಕೂರು ಜಿಲ್ಲೆ ಗುಬ್ಬಿ ನಿವಾಸಿ ಜಯಪ್ರಕಾಶ್ (39) ಕೆರೆಗೆ ಹಾರಿ ಪ್ರಾಣ ಬಿಟ್ಟಿರುವ ವ್ಯಕ್ತಿ. ಈ ಘಟನೆ ದೇವರಹೊಸಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಜಯಪ್ರಕಾಶ್ ಹಲವರ ಬಳಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ, ಜತೆಗೆ ಗೋಮಾಳದಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದ. ಸಾಗುವಳಿ ಚೀಟಿ ಸಹ ನೀಡಲಾಗಿತ್ತು. ಆದರೆ ಅದರ ಪಹಣಿ ಇನ್ನೂ ಆತನ ಹೆಸರಿಗೆ ಬಂದಿರಲಿಲ್ಲ. ಈ ಬಗ್ಗೆ ತೀವ್ರ ಬೇಸರಗೊಂಡಿದ್ದ ಎನ್ನಲಾಗಿದೆ. ದಾಬಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಬಸ್‌ಪೇಟೆ ಪೊಲೀಸರು ಹಾಗೂ ತುಮಕೂರಿನ ಅಗ್ನಿಶಾಮಕ ಸಿಬ್ಬಂದಿ ಕೆರೆಯಿಂದ ಮೃತದೇಹ ಹೊರತೆಗೆದು ದಾಬಸ್‌ಪೇಟೆಯ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net