ವೈಯಕ್ತಿಕ ನಿಂದನೆ; ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು

DKS-HDK-suresh
Published on

ಬೆಂಗಳೂರು: ಬೆಂಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಕುರಿತು ವೈಯಕ್ತಿಕ ನಿಂದನೆ ಮಾಡಿರುವ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ.

ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಕುಮಾರಸ್ವಾಮಿ ಡಿ.ಕೆ.ಸುರೇಶ್ ಅವರಿಗೆ ‘ನಿಮ್ಮದು ಯಾವ ಸಂತತಿ’ ಎಂದು ವೈಯಕ್ತಿಕ ನಿಂದನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ಲೈಯಿಂಗ್ ಸ್ಕ್ವಾಡ್‌ನಿಂದ ಗುಬ್ಬಿ ತಾಲೂಕಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net