ರಾಜ್ಯ ವಿಜ್ಞಾನ ಪರಿಷತ್ತಿನ ಆಡಳಿತ ಮಂಡಳಿ ಚುನಾವಣೆ ಕೋರಿ ಅರ್ಜಿ: ಸರ್ಕಾರಕ್ಕೆ ನೋಟಿಸ್

highcourt
Published on

ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಆಡಳಿತ ಮಂಡಳಿಯ ಆಯ್ಕೆಗೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ಅಧ್ಯಕ್ಷ ಗಿರೀಶ್ ಕಡ್ಲೆವಾಡ ಹಾಗೂ ಮಾಜಿ ಜಂಟಿ ಕಾರ್ಯದರ್ಶಿ ಬಿ.ಎನ್. ಶ್ರೀನಾಥ್ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರ್ಕಾರ, ವಿಜ್ಞಾನ ಪರಿಷತ್ತು ಸೇರಿ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಪರಿಷತ್ತಿನ ಆಡಳಿತ ಮಂಡಳಿಯ ಅವಧಿ 2023ರ ಫೆ.26ಕ್ಕೆ ಮುಕ್ತಾಯವಾಗಿದೆ.

ಮತದಾರರ ಪಟ್ಟಿಯಲ್ಲಿ ಗೊಂದಲ ಇರುವ ಕಾರಣ ಎರಡು ಬಾರಿ ಚುನಾವಣೆ ಮುಂದೂಡಲಾಗಿದೆ. ಆದ್ದರಿಂದ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net