ಬಳ್ಳಾರಿ ಜೈಲಿಗೆ ಸ್ಥಳಾಂತರ ಪ್ರಶ್ನಿಸಿ ಅರ್ಜಿ

highcourt
Published on

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ತನ್ನನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಪ್ರಶ್ನಿಸಿ ಎ14 ಎಸ್.ಪ್ರದೋಷ್ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆ.11 ಮುಂದೂಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರು ಜೈಲಿನ ಘಟನೆ ಕುರಿತಾಗಿ ಅರ್ಜಿದಾರರ ವಿರುದ್ಧ ಯಾವುದೇ ಎ್ಐಆರ್ ಇಲ್ಲ. ಹಾಗಾಗಿ ಅವರನ್ನು ಸ್ಥಳಾಂತರ ಮಾಡಿರುವ ಬಗ್ಗೆ ಆಕ್ಷೇಪವಿದೆ ಎಂದರು.

ಈ ವೇಳೆ ನ್ಯಾಯಪೀಠ ಪ್ರತಿಕ್ರಿಯಿಸಿ, ದರ್ಶನ್ ಕೂಡಾ ಬೆಂಗಳೂರಿಗೆ ಬರಲು ಬಯಸಿದ್ದಾರಾ? ಎಂದರು. ಈ ವೇಳೆ ಅರ್ಜಿದಾರರ ಪರ ವಕೀಲರು, ಇಲ್ಲ. ಎ14 ಮಾತ್ರ ಬೆಳಗಾವಿಯಿಂದ ಬೆಂಗಳೂರಿಗೆ ಹಿಂತಿರುಗಲು ಅರ್ಜಿ ಸಲ್ಲಿಸಿದ್ದಾರೆ ಎಂದರು. ಸೆ.11ಕ್ಕೆ ವಿಚಾರಣೆಯನ್ನು ನ್ಯಾಯಪೀಠ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net