ಪೆಟ್ರೋಲ್​-ಡೀಸೆಲ್​​ ಜಿಎಸ್​ಟಿ ವ್ಯಾಪ್ತಿಗೆ!? CBIC ಅಧ್ಯಕ್ಷರು ಕೊಟ್ಟ ಉತ್ತರ ಹೀಗಿದೆ | GST

petrol
Published on

GST: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್​ನ ಸರಕು ಮತ್ತು ಸೇವಾ ತೆರಿಗೆ (GST) ವ್ಯಾಪ್ತಿಗೆ ತರಬೇಕೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಯ (CBIC) ಅಧ್ಯಕ್ಷ ಸಂಜಯ್ ಕುಮಾರ್ ಅಗರ್ವಾಲ್, ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಸ್ತುತ, ಕೇಂದ್ರ ಅಬಕಾರಿ ಸುಂಕ ಮತ್ತು ಮೌಲ್ಯವರ್ಧಿತ ತೆರಿಗೆ (VAT) ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸಲಾಗುತ್ತಿದೆ ಎಂದ ಸಂಜಯ್ ಕುಮಾರ್ ಅಗರ್ವಾಲ್, ಈ ಎರಡು ಇಂಧನಗಳು ವ್ಯಾಟ್ ರೂಪದಲ್ಲಿ ರಾಜ್ಯಗಳಿಗೆ ಮತ್ತು ಅಬಕಾರಿ ರೂಪದಲ್ಲಿ ಕೇಂದ್ರಕ್ಕೆ ಹೆಚ್ಚಿನ ಆದಾಯವನ್ನು ಗಳಿಸುತ್ತವೆ ಎಂದು ವಿವರಿಸಿದ್ದಾರೆ.

"ಆದಾಯ ಮೇಲಿನ ಪರಿಣಾಮವನ್ನು ಗಮನಿಸಿದರೆ, ಈ ಸಮಯದಲ್ಲಿ ಈ ಇಂಧನಗಳನ್ನು ಜಿಎಸ್​ಟಿ ಅಡಿಯಲ್ಲಿ ತರಲು ಸಾಧ್ಯವಿಲ್ಲ" ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ, ಭಾರತವು ಹೊಸ ಮಾರುಕಟ್ಟೆಗಳನ್ನು ಅನ್ವೇಷಿಸುತ್ತಿದೆ. ದೇಶೀಯ ರಫ್ತುದಾರರು ಚೀನಾದ ಮೇಲೆ ಕೇಂದ್ರೀಕರಿಸುವ ಅವಕಾಶವಿದೆ. ಟ್ರಂಪ್ ಭಾರತದ ಮೇಲೆ ಶೇ.50ರಷ್ಟು ಸುಂಕದಿಂದ ಉಂಟಾದ ನಷ್ಟವನ್ನು ಸರಿದೂಗಿಸಲು ಇದು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net