ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ |prices

Petrol-Diesel
Published on

Govt| ಈಗಾಗಲೇ ರಾಜ್ಯ ಸರ್ಕಾರದ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಇದೀಗ ಕೇಂದ್ರ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ಪ್ರತಿ ಲೀಟರ್‌ ಮೇಲೆ 2 ರೂಪಾಯಿ ಅಬಕಾರಿ ಸುಂಕ ಏರಿಕೆ ಮಾಡಿದೆ.

ಏಪ್ರಿಲ್‌ ತಿಂಗಳ ಆರಂಭದಲ್ಲಿ ರಾಜ್ಯ ಸರ್ಕಾರ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು 2 ರೂಪಾಯಿ ಏರಿಕೆ ಮಾಡಿತ್ತು. ಇದಕ್ಕೆ ಸಾಮಾನ್ಯ ಜನರಿಂದ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈ ನಡುವೆ ಇದೀಗ ಕೇಂದ್ರ ಸರ್ಕಾರ 2 ರೂಪಾಯಿ ಅಬಕಾರಿ ಸುಂಕ ಏರಿಕೆ ಮಾಡಿದೆ.

(ಏಜೆನ್ಸೀಸ್)

ಈ ಬೆಳವಣಿಗೆ ಚಿಲ್ಲರೆ ಮಾರಾಟಗಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬುದನ್ನು ಆದೇಶದಲ್ಲಿ ತಿಳಿಸಿಲ್ಲ. ಆದರೆ ಚಿಲ್ಲರೆ ಬೆಲೆಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.

ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಲೀಟರ್‌ಗೆ 13ರೂ. ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಲೀಟರ್‌ಗೆ 10 ರೂ.ಗೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ನಿಯಮವು 8 ಏಪ್ರಿಲ್ 2025 ರಿಂದ ಜಾರಿಗೆ ಬರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net