

ಆಂಧ್ರಪ್ರದೇಶ: 10ನೇ ತರಗತಿಯ ವಿದ್ಯಾರ್ಥಿಯನ್ನು ಕೆಲವು ಅಪರಿಚಿತ ವ್ಯಕ್ತಿಗಳು ಸಜೀವ ದಹನ ಮಾಡಿರುವ ಭೀಕರ ಕೃತ್ಯ ಆಂಧ್ರಪ್ರದೇಶದ ಬಪಟ್ಲಾ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ: ಹನುಮನಿಗೆ ಮೀಸಲಿಟ್ಟಿದ್ದ ಸೀಟಿನಲ್ಲಿ ಕುಳಿತುಕೊಂಡಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ; ಮಿತಿಮೀರಿದ ವರ್ತನೆ ಎಂದ ನೆಟ್ಟಿಗರು
ಮೃತನನ್ನು 15 ವರ್ಷದ ಅಮರನಾಥ್ ಎಂದು ಗುರುತಿಸಲಾಗಿದ್ದು, ಆತ ಸೈಕಲ್ನಲ್ಲಿ ಟ್ಯೂಷನ್ಗೆ ಹೋಗುತ್ತಿದ್ದಾಗ ರೆಡ್ಲಪಾಲೆಂ ಬಳಿ ದಾಳಿಕೋರರು ವಿದ್ಯಾರ್ಥಿಯನ್ನು ತಡೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬಾಲಕನ ಕಿರುಚಾಟ ಕೇಳಿ ಸ್ಥಳೀಯರು ಬೆಂಕಿ ನಂದಿಸಿ ಗುಂಟೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಸಾಯುವ ಮೊದಲು ವೆಂಕಟೇಶ್ವರ್ ರೆಡ್ಡಿ ಮತ್ತು ಇತರ ಕೆಲವರು ತನಗೆ ಬೆಂಕಿ ಹಚ್ಚಿದ್ದಾರೆ ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ. ಇದೇ ವೆಂಕಟೇಶ್ವರ್ ತಮ್ಮ ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ಅಮರನಾಥ್ ಕುಟುಂಬದವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಕೆಲಸ ಮಾಡು ಎಂದಿದ್ದಕ್ಕೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಯುವಕ
ಇನ್ನು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಜತೆಗೆ ಮೃತನ ಸಹೋದರಿಯು ಅಪ್ರಾಪ್ತ ವಯಸ್ಕಳಾಗಿರುವುದರಿಂದ ಪೋಕ್ಸೊ ಕಾಯ್ದೆಯಡಿ ಮತ್ತೊಂದು ಪ್ರಕರಣವನ್ನು ದಾಖಲಿಸಿಕೊಂಡು ದಾಳಿಕೋರರಿಗಾಗಿ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ.(ಏಜೆನ್ಸೀಸ್)