

ಬೆಂಗಳೂರು ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸ್ನಾತಕೋತ್ತರ ಪದವಿಗೆ (ಎಂಸಿಎ, ಎಂಬಿಎ ಒಳಗೊಂಡಂತೆ) 2023-24ನೇ ಸಾಲಿನಲ್ಲಿ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದ ಶುಲ್ಕವೇ ಅನ್ವಯವಾಗಲಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಕೆಲವು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆರಂಭಿಸಿರುವ ಪಿಜಿ ಕೋರ್ಸ್‌ಗಳಿಗೆ 2019-20ನೇ ಸಾಲಿನಲ್ಲಿದ್ದ ಶುಲ್ಕವನ್ನು 2021-22, 2022-23ನೇ ಸಾಲಿನಲ್ಲಿಯೂ ಮುಂದುವರಿಸಲಾಗಿತ್ತು. 2023-24ನೇ ಸಾಲಿಗೂ ಅದೇ ಶುಲ್ಕವನ್ನೇ ನಿಗದಿ ಮಾಡಲಾಗಿದೆ.
ಗ್ರಾಮಿಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪಾಲಕರಿಗೆ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಶುಲ್ಕ ಹೆಚ್ಚಳ ಮಾಡಿಲ್ಲವೆಂದು ಸೂಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.