

ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಬಿಎ, ಎಂಸಿಎ, ಎಂಇ, ಎಂಟೆಕ್ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿದ್ದ ಪಿಜಿಸಿಇಟಿ-2024ರ ಫಲಿತಾಂಶವನ್ನು ಪ್ರಕಟಿಸಿದೆ.
ಲಿತಾಂಶ ಆಧರಿಸಿ ವೆರಿಫಿಕೇಷನ್ ಸ್ಲಿಪ್ ಅವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈನ್‌ನಲ್ಲಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿಕೊಂಡು ವೆರಿಫಿಕೇಷನ್ ಸ್ಲಿಪ್ ಅವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಬಳಿಕ ಅಗತ್ಯವಿರುವ ಪ್ರಮಣಪತ್ರ, ದಾಖಲೆಗಳು, ಅಂಕಪಟ್ಟಿ, ವ್ಯಾಸಂಗ ಪ್ರಮಾಣಪತ್ರ, ಮೀಸಲಾತಿ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಸಿದ್ಧಪಡಿಸಿಟ್ಟುಕೊಂಡು ಸೀಟು ಹಂಚಿಕೆಯಾದ ನಂತರ ಕಾಲೇಜಿನಲ್ಲಿ ಪ್ರವೇಶ ಪಡೆಯುವಂತೆ ಕೆಇಎ ತಿಳಿಸಿದೆ.
ಕರ್ನಾಟಕೇತರ ಅಭ್ಯರ್ಥಿಗಳಿಗೆ ಯಾವುದೇ ಮೀಸಲಾತಿ ಅನ್ವಯವಾಗುವುದಿಲ್ಲ. ಆದ್ದರಿಂದ ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿರುವ ಕನಿಷ್ಠ ಅಂಕ (ಶೇ.50)ಗಳನ್ನು ಪಡೆದಿದ್ದಲ್ಲಿ ಮಾತ್ರ ಅರ್ಹತೆ ಪಡೆಯಬಹುದಾಗಿದೆ.