ಪಿಜಿಸಿಇಟಿ: ಶುಲ್ಕ ಪಾವತಿ, ಅರ್ಜಿ ತಿದ್ದುಪಡಿಗೆ ಜೂನ್ 24 ಕೊನೇ ದಿನ

kea
Published on

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಎಂಬಿಎ/ ಎಂಸಿಎ / ಎಂಇ / ಎಂ.ಟೆಕ್/ ಎಂ.ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು, ಪರೀಕ್ಷಾ ಕೇಂದ್ರಗಳನ್ನು ನಮೂದಿಸಲು ಹಾಗೂ ಅರ್ಜಿಯಲ್ಲಿನ ಮಾಹಿತಿಯನ್ನು ತಿದ್ದುಪಡಿ ಮಾಡಲು ಜೂ.24ರ ಸಂಜೆ 6ರ ವರೆಗೆ ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net