ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಯೋಜನೆ

27sgr4
ಸಾಗರ ನಗರಸಭೆ ರಂಗಮಂದಿರದಲ್ಲಿ ಏರ್ಪಡಿಸಿದ್ದ ಸರ್ಕಾರಿ ಪಿಯು ಕಾಲೇಜಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಕೆ.ಸಿ.ಸತ್ಯನಾರಾಯಣ, ಇಂದೂಧರ ಗೌಡ, ಎಚ್.ಕೆ.ನಾಗಪ್ಪ ಇತರರಿದ್ದರು.
Published on

ಸಾಗರ: ಸರ್ಕಾರಿ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದು, ಅಗತ್ಯ ಅನುದಾನ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ನಗರಸಭೆ ರಂಗಮಂದಿರದಲ್ಲಿ ಏರ್ಪಡಿಸಿದ್ದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾ, ಸಾಂಸ್ಕೃತಿಕ, ಎನ್‌ಎಸ್‌ಎಸ್ ಘಟಕಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಲೇಜಿನಲ್ಲಿ 2,500 ಮಕ್ಕಳು ಅಧ್ಯಯನ ಮಾಡುತ್ತಿದ್ದು, ಕಾಲೇಜಿಗೆ ಹೆಚ್ಚುವರಿಯಾಗಿ ಐದು ಕೊಠಡಿ ನಿರ್ಮಾಣ ಮಾಡಲಾಗುತ್ತದೆ. ರಂಗಮಂದಿರ ನಿರ್ಮಾಣಕ್ಕೆ 35 ಲಕ್ಷ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದರು.

ಪಾಲಕರು ವಿದ್ಯಾರ್ಥಿಗಳ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ದ್ವಿತೀಯ ಪಿಯು ನಂತರ ಇರುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಪಠ್ಯದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು ಎಂದರು.

ಕಾಲೇಜಿನ ಪ್ರಾಚಾರ್ಯ ಕೆ.ಸಿ.ಸತ್ಯನಾರಾಯಣ, ಇಂದೂಧರ ಗೌಡ, ಎಚ್.ಕೆ.ನಾಗಪ್ಪ, ಕೆ.ವಿ.ರವೀಂದ್ರ, ಜಿ.ಪರಮೇಶ್ವರಪ್ಪ, ಲಲಿತಮ್ಮ, ಗಣಪತಿ ಮಂಡಗಳಲೆ, ರವಿ ಲಿಂಗನಮಕ್ಕಿ, ಭವ್ಯಾ, ಬಸವರಾಜ್, ಉಮೇಶ್ ಸೂರನಗದ್ದೆ, ರಮಾ, ಪಿ.ಮಂಜಪ್ಪ, ಸೀತಾರಾಮ ಪಟಗಾರ್, ಕೆ.ಎಸ್.ದೇವೇಂದ್ರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net