

ಬನ್ನೂರು: ಪ್ರತಿಯೊಬ್ಬರೂ ಜೀವನದಲ್ಲಿ ಒಂದು ಗಿಡ ನೆಟ್ಟು ಬೆಳೆಸಿದರೆ ನಾವು ಪ್ರಕೃತಿಗೆ ಕೊಡುಗೆ ನೀಡಿದಂತೆ ಆಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಮೇಲ್ವಿಚಾರಕ ಮಂಜುನಾಥ್ ತಿಳಿಸಿದರು.
ಪಟ್ಟಣದ ಸಮೀಪದ ವ್ಯಾಸರಾಜಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದು ಮರ-ಗಿಡಗಳು ಸಾಕಷ್ಟು ಕಡಿಮೆ ಆಗುತ್ತಿದ್ದು, ಗಿಡವನ್ನು ಬೆಳಸುವಂತಹ ಕಾರ್ಯಕ್ಕೆ ಯಾರೂ ಒತ್ತು ನೀಡದಿರುವುದು ವಾತವರಣದ ವೈಪರೀತ್ಯದ ಬದಲಾವಣೆಗೆ ಕಾರಣವಾಗಿದೆ ಎಂದು ತಿಳಿಸಿದರು.
ಪ್ರತಿಯೊಬ್ಬರೂ ಖಾಲಿ ಜಾಗದಲ್ಲಿ ಗಿಡ ಬೆಳೆಸಿ ಪೋಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ಕಲ್ಪಿಸಬೇಕಿದೆ ಎಂದು ಹೇಳಿದರು. ಶಾಲೆಯ ಮುಖ್ಯಶಿಕ್ಷಕ ಎಂ.ನಾಗೇಂದ್ರ, ಕೃಷಿ ಮೇಲ್ವಿಚಾರಕ ಮಂಜುನಾಥ್, ಗ್ರಾಮ ಪಂಚಾಯಿತಿ ಸದಸ್ಯರಾದ ರಾಜಮ್ಮ, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ್, ಕುಮಾರಸ್ವಾಮಿ, ರಂಗಸ್ವಾಮಿ, ರೇವಣ್ಣ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.