LIVE| ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮೇನಿಯಾ! ಕ್ಷಣದ ಕ್ಷಣದ ಮಾಹಿತಿಗಾಗಿ ನೇರಪ್ರಸಾರ ವೀಕ್ಷಿಸಿ...

PM modi
Published on

ಬೆಂಗಳೂರು: ದಕ್ಷಿಣ ಭಾರತದ ಮೊದಲ ವಂದೇ ಭಾರತ್​ ರೈಲಿಗೆ (Vande Bharat Train) ಚಾಲನೆ, ನಾಡಪ್ರಭು ಕೆಂಪೇಗೌಡ (Nadaprabhu Kempegowda)ರ ಪ್ರತಿಮೆ ಅನಾವರಣ ಹಾಗೂ ವಿಮಾನ ನಿಲ್ದಾಣದ ಟರ್ಮಿನಲ್​-2 ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು (ನ.11) ರಾಜ್ಯ ರಾಜಧಾನಿ ಬೆಂಗಳೂರಿಗೆ (Bengaluru) ಆಗಮಿಸಿದ್ದಾರೆ. ಇಂದು ಮಧ್ಯಾಹ್ನದವರೆಗೂ ಪ್ರಧಾನಿ ಮೋದಿ ಅವರು ಬೆಂಗಳೂರಿನಲ್ಲಿ ಇರಲಿದ್ದು, ಅವರು ಭಾಗವಹಿಸುವ ಕಾರ್ಯಕ್ರಮಗಳ ನೇರಪ್ರಸಾರವನ್ನು ಮೇಲಿನ ದಿಗ್ವಿಜಯ ನ್ಯೂಸ್​ ಯೂಟ್ಯೂಬ್​ ನೇರಪ್ರಸಾರದಲ್ಲಿ ನೋಡಬಹುದು.

ಬೆಳಗ್ಗೆ 9 ಗಂಟೆಗೆ ಸರಿಯಾಗಿ ಪ್ರಧಾನಿ ಮೋದಿ ಬೆಂಗಳೂರಿನ ಎಚ್​ಎಎಲ್​ ವಿಮಾನ ನಿಲ್ದಾಣ (HAL Airport)ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು. ಈ ವೇಳೆ ರಾಜ್ಯಪಾಲರಾದ ಥಾವರ್​ ಚಂದ್​ ಗೆಹ್ಲೋಟ್ (Thawar Chand Gehlot)​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai), ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಹಾಗೂ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಪ್ರಧಾನಿ ನರೇಂದ್ರ ಮೋದಿಯವರ ಇಂದಿನ ಕಾರ್ಯಕ್ರಮ

9.45 ರಿಂದ ಶಾಸಕರ ಭವನದಲ್ಲಿ ಕನಕದಾಸ ಮತ್ತು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ

10.20 ರಿಂದ ವಂದೇ ಭಾರತ್, ಭಾರತ್ ಗೌರವ್ ಕಾಶಿ ದರ್ಶನ್ ರೈಲುಗಳಿಗೆ ಹಸಿರು ನಿಶಾನೆ

11.30 ಏರ್ ಪೋರ್ಟ್ ಟರ್ಮಿನಲ್-2 ಉದ್ಘಾಟನೆ

12.00 ರಿಂದ 12.20 ಪ್ರತಿಮೆ ಲೋಕಾರ್ಪಣೆ

12.30 ರಿಂದ ಸಾರ್ವಜನಿಕ ಸಮಾವೇಶ

01.45ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಮಧುರೈಗೆ ಪ್ರಯಾಣ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net