

ಬೆಂಗಳೂರು: ಹಾಸನ ಲೋಕಸಭೆ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಪ್ರಧಾನಿ ಮೋದಿ ಅವರು ಆಶೀರ್ವಾದ ಮಾಡುತ್ತಾರೆ. ಕುಮಾರಸ್ವಾಮಿ, ನಾನು ಕೂಡ ಆಶೀರ್ವಾದ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಜ್ವಲ್ ರೇವಣ್ಣ ಹಾಸನದಿಂದ ಮತ್ತೆ ಸ್ಪರ್ಧೆ ಮಾಡುತ್ತಾರಾ? ಎನ್ನುವ ಮಾಧ್ಯಮಗಳ ಪ್ರಶ್ನೆಗೆ, ಈ ಬಗ್ಗೆ ನಿಮಗೆ ಅನುಮಾನ ಏಕೆ? ಎಂದು ಕೇಳಿದರು.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್. ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ ಹಾಜರಿದ್ದರು.