

ಕಚ್: ಗುಜರಾತ್‌ನ ಕಚ್‌ನಲ್ಲಿ ಬೀಡುಬಿಟ್ಟಿರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೀಪಾವಳಿ ಆಚರಿಸಿದರು. ಕಚ್‌ನ ಸರ್ ಕ್ರೀಕ್ ಪ್ರದೇಶದ ಲಕ್ಕಿ ನಾಲಾದಲ್ಲಿ ನಿಯೋಜಿಸಲಾದ ಸೈನಿಕರಿಗೆ ಬಿಎಸ್‌ಎಫ್‌ನ ಸಮವಸ್ತ್ರದಲ್ಲಿ ಪ್ರಧಾನಿ ಸಿಹಿ ಹಂಚಿದರು.
ಗುಜರಾತ್‌ನ ಕಚ್‌ನಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಕಚ್ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಸರ್ ಕ್ರೀಕ್ ಬಳಿಯ ಲಕ್ಕಿ ನಾಲಾದಲ್ಲಿ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿದ ಪ್ರಧಾನಿ ಮೋದಿ ಭಾರತೀಯ ಸೈನಿಕರಿಗೆ ಸಿಹಿತಿಂಡಿಗಳನ್ನು ತಿನ್ನಿಸಿದ್ದಾರೆ.
2014ರಿಂದ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷವೂ ದೀಪಾವಳಿಯನ್ನು ದೇಶದ ವಿವಿಧ ಮೂಲೆಗಳಲ್ಲಿ ನಿಯೋಜಿಸಲಾದ ಸೈನಿಕರೊಂದಿಗೆ ಆಚರಿಸುವ ಸಂಪ್ರದಾಯ ರೂಢಿಸಿಕೊಂಡಿದ್ದಾರೆ. ಸೇನೆಯ ಸಮವಸ್ತ್ರವನ್ನು ಧರಿಸಿರುವ ಪ್ರಧಾನಿ ಮೋದಿ ಕಚ್‌ನಲ್ಲಿ ನಿಯೋಜಿಸಲಾದ ಸೈನಿಕರಿಗೆ ಸಿಹಿತಿಂಡಿಗಳನ್ನು ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ