ರಾಧಾಕೃಷ್ಣನ್​ ಅತ್ಯುತ್ತಮ ಉಪರಾಷ್ಟ್ರಪತಿ ಆಗ್ತಾರೆ: ಪ್ರಧಾನಿ ಮೋದಿ ವಿಶ್ವಾಸ | Vice President

Untitled design - 2025-09-09T235546.723
Published on

ನವದೆಹಲಿ: ಉಪರಾಷ್ಟ್ರಪತಿ( Vice President) ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ಅವರು ಅತ್ಯುತ್ತಮ ಉಪರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

452 ಮತಗಳಿಂದ ಗೆಲುವು

ಮಂಗಳವಾರ(ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಧಾಕೃಷ್ಣನ್ 452 ಮತಗಳನ್ನು ಗಳಿಸುವ ಮೂಲಕ ಗೆದ್ದರು. ವಿರೋಧ ಪಕ್ಷದ ಅಭ್ಯರ್ಥಿ ಬಿ.ಸುದರ್ಶನ್ ರೆಡ್ಡಿ 300 ಮತಗಳನ್ನು ಗಳಿಸಿದರು.

ರಾಧಾಕೃಷ್ಣನ್ ಅವರ ಜೀವನವು ಯಾವಾಗಲೂ ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ಬಡವರು ಮತ್ತು ಅಂಚಿನಲ್ಲಿರುವವರ ಸಬಲೀಕರಣಕ್ಕೆ ಮೀಸಲಾಗಿದೆ ಎಂದು ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊ0ಡಿದ್ದಾರೆ.

"2025 ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ತಿರು ಸಿ.ಪಿ. ರಾಧಾಕೃಷ್ಣನ್ ಜಿ ಅವರಿಗೆ ಅಭಿನಂದನೆಗಳು. ಅವರ ಜೀವನವು ಯಾವಾಗಲೂ ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ಬಡವರು ಮತ್ತು ಅಂಚಿನಲ್ಲಿರುವವರ ಸಬಲೀಕರಣಕ್ಕೆ ಮೀಸಲಾಗಿದೆ. ಅವರು ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ಮತ್ತು ಸಂಸದೀಯ ಸಂವಾದವನ್ನು ಹೆಚ್ಚಿಸುವ ಅತ್ಯುತ್ತಮ ಉಪಾಧ್ಯಕ್ಷರಾಗುತ್ತಾರೆ ಎಂಬ ವಿಶ್ವಾಸ ನನಗಿದೆ" ಎಂದು ಪ್ರಧಾನಿ ಹೇಳಿದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net