ದಿ ಎಲಿಫೆಂಟ್​ ವಿಸ್ಪರ್ಸ್​​ ಚಿತ್ರ ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ: ಪ್ರಧಾನಿ ಟ್ವೀಟ್​

modi
Published on

ನವದೆಹಲಿ: ಇತ್ತೀಚಿಗೆ ನಡೆದ 95ನೇ ಆಸ್ಕರ್​ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದ ದಿ ಎಲಿಫೆಂಟ್​ ವಿಸ್ಪರ್ಸ್​​ ಚಿತ್ರತಂಡದ ಸದಸ್ಯರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ ದಿ ಎಲಿಫೆಂಟ್​ ವಿಸ್ಪರ್ಸ್ ಸಾಕ್ಷ್ಯಚಿತ್ರವು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಚಿತ್ರತಂಡದ ಸದಸ್ಯರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತ್ತು. ಇಡೀ ದೇಶವನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ಟ್ವೀಟ್​ ಮಾಡಿದ್ದಾರೆ.

ಚಿತ್ರದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್ ಮತ್ತು ನಿರ್ಮಾಪಕಿ ಗುನೀತ್​ ಮೊಂಗಾ ಅವರ ಜೊತೆ ಇರುವ ಫೋಟೋವನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ದಿ ಎಲಿಫೆಂಟ್​ ವಿಸ್ಪರ್ಸ್​​ ಚಿತ್ರದಲ್ಲಿ ಆನೆ ಹಾಗೂ ಮನುಷ್ಯನ ನಡುವಿನ ಅವಿನಾಭಅವ ಸಂಬಂಧವನ್ನ ತೋರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net