ಉನ್ನಾವೋ ಅಪಘಾತ: ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

modi
Published on

ಲಖನೌ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಮತ್ತು ಹಾಲಿನ ಕಂಟೈನರ್‌ ನಡುವೆ ನಡೆದ ಅಪಘಾತದಲ್ಲಿ ಮೃತಪಟ್ಟ 18 ಮಂದಿಯ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಬುಧವಾರ ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯ ಹೊರಡಿಸಿದ ಅಧಿಕೃತ ಹೇಳಿಕೆಯಲ್ಲಿ, "ಉನ್ನಾವ್ ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬ ವ್ಯಕ್ತಿಯ ಸಂಬಂಧಿಕರಿಗೆ ಪಿಎಂಎನ್​ಆರ್​ಎಫ್​ ನಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದೆ.

ಮುಂಜಾನೆ 5:15ಕ್ಕೆ ಅಪಘಾತ ನಡೆದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಾಮಾಜಿಕ ಮಾಧ್ಯಮ X ನಲ್ಲಿ "ಅಪಘಾತವು ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಬರೆದಿದ್ದಾರೆ,."

ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಬಿಹಾರದ ಮೋತಿಹಾರಿಯಿಂದ ದೆಹಲಿಗೆ ಹೋಗುತ್ತಿದ್ದಾಗ ಬೆಹ್ತಮುಜ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಧಾ ಗ್ರಾಮದ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಹಿಂದಿನಿಂದ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net