ಅಷ್ಟಕ್ಕೂ ಪ್ರಧಾನಿ ಮೋದಿ ವೇದಿಕೆ ಮೇಲೆ ಸಿಎಂ ಯೋಗಿ ಕೈ ಹಿಡಿದು ಕರೆದರೇಕೆ? ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!

modi new
Published on

ಉತ್ತರಪ್ರದೇಶ: 2024ರ ಲೋಕಸಭೆ ಚುನಾವಣೆಯ ಮೊದಲ ಹಂತಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಎಲ್ಲಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಯುಪಿಯ ಪಿಲಿಭಿತ್ ನಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದರು.   

ಈ ವೇಳೆ ಪ್ರಧಾನಿ ಮೋದಿ ಜೊತೆಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ಮೋದಿಯವರಿಗೆ ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರು ಕೊಳಲು ಕೊಡುವ ಮೂಲಕ ಸ್ವಾಗತಿಸಿದರು.

ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಪ್ರತಿಪಕ್ಷಗಳ ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವೇದಿಕೆಯಲ್ಲಿ ಪ್ರಧಾನಿ ಮೋದಿ, ಸಿಎಂ ಯೋಗಿ, ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಚೌಧರಿ ಇದ್ದರು. ಆಗ ನಡೆದ ಘಟನೆಯೊಂದು ಎಲ್ಲರ ಗಮನ ಸೆಳೆಯಿತು.   

ವೇದಿಕೆಯಲ್ಲಿದ್ದ ಪ್ರಧಾನಿ ಮೋದಿ ಸಿಎಂ ಯೋಗಿಯ ಕೈ ಹಿಡಿದು ಕರೆದರು. ಏಕೆಂದರೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಸಿಎಂ ಯೋಗಿ ಹಿಂಬದಿಯಿಂದ ವೇದಿಕೆ ಏರಲು ಮುಂದಾಗಿದ್ದರು.ಆಗ ಪ್ರಧಾನಿ ಸಿಎಂ ಯೋಗಿ ಅವರ ಕೈ ಹಿಡಿದು ಮುಂದಿನಿಂದ ಹೋಗುವಂತೆ ಹೇಳಿದರು.  ಸದ್ಯ ಈ ಘಟನೆಯ  ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.    

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net