

ಇದು ಪ್ರಧಾನಿ ಮೋದಿ ಅವರಿಗೆ ದೊರೆತ 22ನೇ ಅಂತರರಾಷ್ಟ್ರೀಯ ಪ್ರಶಸ್ತಿಯಾಗಿದೆ. ಮಿತ್ರ ವಿಭೂಷಣ ಪ್ರಶಸ್ತಿಯು ಶ್ರೀಲಂಕಾ ಸರ್ಕಾರವು ರಾಷ್ಟ್ರದ ಮುಖ್ಯಸ್ಥರಿಗೆ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ.
ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು ಕೊಲಂಬೊದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಶ್ರೀಲಂಕಾದೊಂದಿಗೆ ಸ್ನೇಹ ಸಂಬಂಧವನ್ನು ಕಾಯ್ದುಕೊಳ್ಳುವ ವಿಶ್ವ ರಾಷ್ಟ್ರಗಳ ನಾಯಕರನ್ನು ಗೌರವಿಸಲು ಈ ಪ್ರಶಸ್ತಿಯನ್ನು ವಿಶೇಷವಾಗಿ ರಚಿಸಲಾಗಿದೆ.
ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಶ್ರೀಲಂಕಾದ ಅತ್ಯುನ್ನತ ಪ್ರಶಸ್ತಿಯಾದ ಶ್ರೀಲಂಕಾ ಮಿತ್ರ ವಿಭೂಷಣವನ್ನು ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ. ಪ್ರಧಾನಿ ಮೋದಿ ಈ ಗೌರವಕ್ಕೆ ಅರ್ಹರು ಎಂದು ನಾವು ದೃಢವಾಗಿ ನಂಬುತ್ತೇವೆ" ಎಂದು ಶ್ರೀಲಂಕಾ ಅಧ್ಯಕ್ಷ ದಿಸ್ಸನಾಯಕೆ ಹೇಳಿದರು.
ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಪ್ರಧಾನಿ ಮೋದಿ, ಈ ಗೌರವವು ಕೇವಲ ವೈಯಕ್ತಿಕ ಮನ್ನಣೆಯಲ್ಲ, ಬದಲಾಗಿ 140 ಕೋಟಿ ಭಾರತೀಯರಿಗೆ ಸಲ್ಲುವ ಗೌರವವಾಗಿದೆ. ಪ್ರಶಸ್ತಿ ಪ್ರದಾನ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಅವರು ಶ್ರೀಲಂಕಾದ ಅಧ್ಯಕ್ಷರು, ಸರ್ಕಾರ ಮತ್ತು ಜನರಿಗೆ ಧನ್ಯವಾದ. ಈ ಗೌರವವು ಎರಡೂ ನೆರೆಯ ರಾಷ್ಟ್ರಗಳ ನಡುವಿನ ದೀರ್ಘಕಾಲದ ಸಂಬಂಧ ಮತ್ತು ಬಲವಾದ ಸ್ನೇಹಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.